Featured

ಅಸ್ಸಾಂ ಮತ್ತೆ ಒಳ ನುಸುಳುಕೋರರ ಕೇಂದ್ರವಾಗಲು ಬಿಡುವುದಿಲ್ಲ : ಅಮಿತ್ ಶಾ -Vishwanews24

ಅಸ್ಸಾಂ ಮತ್ತೆ ಒಳ ನುಸುಳುಕೋರರ ಕೇಂದ್ರವಾಗಲು ಬಿಡುವುದಿಲ್ಲ : ಅಮಿತ್ ಶಾ -Vishwanews24

ಗುವಾಹಟಿ: ಅಸ್ಸಾಂ ಮತ್ತೆ ಒಳನುಸುಳುಕೋರರ ಕೇಂದ್ರವಾಗಲು ನಾನು ಬಿಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.

ಅಸ್ಸಾಂ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಭೆಗಳನ್ನು ಕೈಗೊಂಡಿದ್ದಾರೆ. ಎಐಯುಡಿಎಫ್ ಮುಖ್ಯಸ್ಥ ಬದ್ರುದ್ದಿನ್ ಅಜ್ಮಲ್ ಅವರಿಗೆ ಸವಾಲು ಹಾಕಿರುವ ಅಮಿತ್ ಶಾ ಯಾವುದೇ ಕಾರಣಕ್ಕೂ ಅಸ್ಸಾಂ ಮತ್ತೆ ಒಳನುಸುಳುಕೋರರ ಕೇಂದ್ರವಾಗಲು ಬಿಡುವುದಿಲ್ಲ, ಕಳೆದ ಐದು ವರ್ಷಗಳಿಂದ ಭೂಭಾಗವನ್ನು ಅತಿಕ್ರಮಿಸಿಕೊಂಡಿದ್ದಾರೆ.

ಜನರು ಯಾರು ಇರಬೇಕು ಯಾರು ಇರಬಾರದು ಎಂದು ತೀರ್ಮಾನ ಮಾಡುತ್ತಾರೆ ಎಂದು ಬಿಜ್ನಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಸಮಯದಲ್ಲಿ ಹೇಳಿದರು. ಬಂಗಾಳದಲ್ಲಿ ಮೊದಲ ಹಂತದ 30 ಕ್ಷೇತ್ರಗಳ ಪೈಕಿ 26 ಮತ್ತು ಅಸ್ಸಾಂನ ಮೊದಲ ಹಂತದ 47 ಕ್ಷೇತ್ರಗಳ ಪೈಕಿ 37 ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸಲಿದೆ ಎಂದು ಅಮಿತ್ ಶಾ ಭವಿಷ್ಯ ನುಡಿದರು.

ಇದನ್ನೂ ಓದಿ :  ಮಂಗಳೂರು : ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ವಿರೋಧ -Vishwanews24

ಎರಡೂ ರಾಜ್ಯಗಳಲ್ಲಿ ಶೇಕಡಾವಾರು ಮತದಾನ ಪ್ರಮಾಣ ಅಧಿಕವಾಗಿದ್ದು, ಇದು ಬಿಜೆಪಿ ಪರ ಉಭಯ ರಾಜ್ಯಗಳ ಜನರ ಒಲವು ಎತ್ತಿ ತೋರಿಸುತ್ತದೆ ಎಂದು ಅಮಿತ್ ಶಾ ಅಭಿಪ್ರಾಯಪಟ್ಟರು. ಪಶ್ಚಿಮ ಬಂಗಾಳ ಹಾಗೂ ಅಸ್ಸಾಂನಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿ ಪರ ಮತದಾರನ ಒಲವು ಕಂಡುಬಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಬಂಗಾಳ ಮತ್ತು ಅಸ್ಸಾಂನಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳು ಲಭಿಸಲಿವೆ ಎಂದು ಭರವಸೆ ವ್ಯಕ್ತಪಡಿಸಿದರು.

ಇದನ್ನೂ ಓದಿ : ವೇಣೂರು ಗ್ರಾ. ಪಂ. ಚುನಾವಣೆ : ಆರು ಸ್ಧಾನಗಳಲ್ಲಿ ಬಿಜೆಪಿ ಬೆಂಬಲಿತರಿಗೆ ಗೆಲುವು -Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago