Featured

ಅಸ್ಸಾಂ ಮಾತ್ರವಲ್ಲ, ಇಡೀ ದೇಶವನ್ನು ಅಕ್ರಮ ವಲಸಿಗರಿಂದ ಮುಕ್ತಗೊಳಿಸುತ್ತೇವೆ : ಅಮಿತ್‌ ಶಾ -Vishwanews24

ಗುವಾಹಟಿ: ದೇಶದಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಪ್ರಕ್ರಿಯೆ ಕೈಗೊಳ್ಳಲು ಸರ್ಕಾರ ಸಜ್ಜಾಗಿದೆ ಎಂಬ ಸುಳಿವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿದ್ದಾರೆ. ಅಸ್ಸಾಂನಲ್ಲಿನ ಎನ್‌ಆರ್‌ಸಿ ಅಂತಿಮ ಪಟ್ಟಿ ಈಗಾಗಲೇ ಪ್ರಕಟವಾಗಿದೆ. ಅದರ ಬೆನ್ನಲ್ಲೇ ಶಾ ಅವರು ಈ ಸುಳಿವು ನೀಡಿದ್ದಾರೆ.

ದೇಶದಾದ್ಯಂತ ಇರುವ ಅಕ್ರಮ ವಲಸಿಗರನ್ನು ಗುರುತಿಸಿ ಅವರನ್ನು ಹೊರಗೆ ಅಟ್ಟಲಾಗುವುದು ಎಂದು ಅವರು ಹೇಳಿದ್ದಾರೆ. ಅಸ್ಸಾಂನ ಎನ್ಆರ್‌ಸಿ ಅಂತಿಮಪಟ್ಟಿ ಆ. 31ರಂದು ಪ್ರಕಟವಾಗಿದೆ. ಒಟ್ಟು 19 ಲಕ್ಷ ಮಂದಿಯನ್ನು ಪಟ್ಟಿಯಿಂದ ಹೊರಗೆ ಇರಿಸಲಾಗಿದೆ.

ಅಕ್ರಮ ವಲಸಿಗರು ದೇಶದ ಯಾವುದೇ ಮೂಲೆಯಲ್ಲಿದ್ದರೂ ಗುರುತಿಸಿ ಹೊರದಬ್ಬಲಾಗುವುದು ಎಂದು ಈಶಾನ್ಯ ಮಂಡಳಿಯ ಸಭೆಯಲ್ಲಿ ಭಾಗವಹಿಸಿದ್ದ ಅವರು ಭಾನುವಾರ ಹೇಳಿದ್ದರು. ಬಿಜೆಪಿ ನೇತೃತ್ವದ ಈಶಾನ್ಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ (ಎನ್‌ಇಡಿಎ) ಸಭೆಯಲ್ಲಿ ಸೋಮವಾರ ಮಾತನಾಡಿದ ಅವರು ಇದೇ ಮಾತನ್ನು ಪುನರುಚ್ಚರಿಸಿದ್ದಾರೆ.

‘ಬಹಳಷ್ಟು ಮಂದಿಯ ಹೆಸರು ಎನ್‌ಆರ್‌ಸಿಯಿಂದ ಬಿಟ್ಟುಹೋಗಿದೆ ಎಂಬ ಭಾವನೆ ಇದೆ. ಅಕ್ರಮ ವಲಸಿಗರು ಅಸ್ಸಾಂನಲ್ಲಿ ನೆಲೆಸಲು ಬಿಡುವುದಿಲ್ಲ, ಅವರು ಬೇರೆ ರಾಜ್ಯಕ್ಕೆ ನುಸುಳಲೂ ಅವಕಾಶ ಕೊಡುವುದಿಲ್ಲ. ದೇಶದಲ್ಲಿ ಅಕ್ರಮ ವಲಸಿಗರು ಇರಬಾರದು’ ಎಂದು ಶಾ ಹೇಳಿದ್ದಾರೆ. ಅಸ್ಸಾಂನಲ್ಲಿರುವ ಅಕ್ರಮ ವಲಸಿಗರು ಮೇಘಾಲಯಕ್ಕೆ ನುಸುಳಬಹುದು ಎಂದು ಅಲ್ಲಿನ ಮುಖ್ಯಮಂತ್ರಿ ವ್ಯಕ್ತಪಡಿಸಿದ ಆತಂಕಕ್ಕೆ ಶಾ ಹೀಗೆ ಹೇಳಿದ್ದಾರೆ.

.* ಅಸ್ಸಾಂ ಮಾತ್ರವಲ್ಲ, ಇಡೀ ದೇಶವನ್ನು ಅಕ್ರಮ ವಲಸಿಗರಿಂದ ಮುಕ್ತಗೊಳಿಸುತ್ತೇವೆ. ಅದಕ್ಕಾಗಿ ಯೋಜನೆ ಸಿದ್ಧವಾಗಿದೆ. ಎಲ್ಲ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇದನ್ನು ಜಾರಿಗೆ ತರತ್ತೇವೆ.

–ಅಮಿತ್‌ ಶಾ, ಕೇಂದ್ರ ಗೃಹ ಸಚಿವ

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago