ನವದೆಹಲಿ : ಇಂದು ಕೇಂದ್ರ ಸರ್ಕಾರ ಅಸ್ಸಾಂ ರಾಷ್ಟ್ರೀಯ ಪೌರತ್ವ ಪಟ್ಟಿ ಪ್ರಕಟವಾಗಿದ್ದು, ಅಸ್ಸಾಂನಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಅಸ್ಸಾಂ ರಾಷ್ಟ್ರೀಯ ಪೌರತ್ವ ಪಟ್ಟಿ ಪ್ರಕಟವಾಗಿದ್ದು, 3,11,21,004 ಅಸ್ಸಾಂ ಅಧಿಕೃತ ನಾಗರಿಕರಾಗಿದ್ದು, 19 ಲಕ್ಷ 6,657 ಜನ ಪಟ್ಟಿಯಿಂದ ಹೊರಕ್ಕೆ ಹಾಕಲಾಗಿದ್ದು, 19 ಲಕ್ಷಕ್ಕೂ ಹೆಚ್ಚು ಅಕ್ರಮ ವಲಸಿಗರು ಎಂದು ಕೇಂದ್ರ ಗೃಹ ಇಲಾಖೆಯಿಂದ ಎನ್ ಆರ್ ಸಿ ಅಂತಿಮ ಪಟ್ಟಿಯಲ್ಲಿ ತಿಳಿಸಲಾಗಿದೆ.
ಅಸ್ಸಾಂ ರಾಜ್ಯ ನೆರೆಯ ಬಾಂಗ್ಲಾದೇಶದೊಂದಿಗೆ ಗಡಿ ಹಂಚಿಕೊಂಡಿದೆ.
ಹೀಗಾಗಿ ಇಲ್ಲಿ ಬಾಂಗ್ಲಾದೇಶದವರು ಅಕ್ರಮವಾಗಿ ನೆಲೆಸಿದ್ದಾರೆ. ಅಕ್ರಮ ವಲಸಿಗರಿಂದ ಇಲ್ಲಿ ಹೆಚ್ಚಿನ ಹಿಂಸಾಚಾರ, ಗಲಭೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸುಪ್ರೀಂಕೋರ್ಟ್ ನಿಗಾದಲ್ಲಿ ಅಸ್ಸಾಂನಲ್ಲಿ ಮಾತ್ರ ಎನ್ ಆರ್ ಸಿ ನೋಂದಣಿ ಕಾರ್ಯ ನಡೆಸಿತ್ತು. ಇನ್ನು ಎನ್ ಆರ್ ಸಿ ಪಟ್ಟಿಯಲ್ಲಿ ಸೇರ್ಪಡೆಯಾಗದ್ದವರನ್ನು ಗಡೀಪಾರು ಮಾಡುವ ಸಂಭವವಿದೆ ಎನ್ನಲಾಗಿದೆ.
ಇಂದು ಅಧಿಕೃತವಾಗಿ ಅಸ್ಸಾಂ ಸರಕಾರ ಬಿಡುಗಡೆಗೊಳಿಸಿದ ಎನ್ ಆರ್ ಸಿ ಅಂತಿಮ ಪಟ್ಟಿಯಲ್ಲಿ ಒಟ್ಟು 3,11, 21,004 ಮಂದಿ ಅಸ್ಸಾಂ ಪೌರತ್ವ ಪಡೆದಿದ್ದು, 19,06, 657 ಮಂದಿಯನ್ನು ಪಟ್ಟಿಯಿಂದ ಹೊರಗಿಟ್ಟಿದೆ. ಇವರೆಲ್ಲಾ ತಾವು ಅಸ್ಸಾಂ ನಿವಾಸಿಗಳೆಂಬ ಬಗ್ಗೆ ಯಾವುದೇ ದಾಖಲೆ ಸಲ್ಲಿಸಿಲ್ಲವಾಗಿತ್ತು ಎಂದು ವರದಿ ವಿವರಿಸಿದೆ.

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…