Featured

ಅ.1ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಪೂರ್ಣ ಪ್ರಮಾಣದ ತರಗತಿ -Vishwanews24

ಅ.1ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಪೂರ್ಣ ಪ್ರಮಾಣದ ತರಗತಿ -Vishwanews24

ಬೆಂಗಳೂರು: ಕೋವಿಡ್‌ ಪ್ರಕರಣಗಳ ದೃಢಪ್ರಮಾಣ ದರ ಶೇಕಡ 0.66ಕ್ಕೆ ಕುಸಿದಿರುವುದರಿಂದ ಅಕ್ಟೋಬರ್‌ 1ರಿಂದ ಆರನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.

ಶುಕ್ರವಾರ ಕೋವಿಡ್‌ ನಿಯಂತ್ರಣ ಕಾರ್ಯಪಡೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಕೋವಿಡ್‌ ದೃಢಪ್ರಮಾಣ ದರ ಶೇ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ವಾರದಲ್ಲಿ ಐದು ದಿನಗಳ ಕಾಲ ಆರರಿಂದ ದ್ವಿತೀಯ ಪಿಯುಸಿವರೆಗಿನ ಶೇ 100ರಷ್ಟು ವಿದ್ಯಾರ್ಥಿಗಳಿಗೆ ತರಗತಿ ನಡೆಸಲಾಗುವುದು. ಶನಿವಾರ ಮತ್ತು ಭಾನುವಾರ ತರಗತಿ ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಲಾಗುವುದು. ದೃಢಪ್ರಮಾಣ ದರ ಶೇ 1ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಈಗಿರುವಂತೆ ದಿನ ಬಿಟ್ಟು ದಿನ ಅರ್ಧದಷ್ಟು ವಿದ್ಯಾರ್ಥಿಗಳಿಗೆ ಸರದಿಯ ಮೇಲೆ ತರಗತಿಗಳು ನಡೆಯಲಿವೆ’ ಎಂದರು.

ಪಬ್‌ ಆರಂಭಕ್ಕೂ ಒಪ್ಪಿಗೆ: ಅ.3ರಿಂದ ಪಬ್‌ಗಳ ಆರಂಭಕ್ಕೆ ಅನುಮತಿ ನೀಡಲಾಗಿದೆ. ಚಿತ್ರಮಂದಿರಗಳಿಗೆ ಅನ್ವಯವಾಗುವ ಮಾರ್ಗಸೂಚಿಗಳು ಪಬ್‌ಗಳಿಗೂ ಅನ್ವಯವಾಗುತ್ತವೆ ಎಂದು ಮುಖ್ಯಮಂತ್ರಿ ಪ್ರಕಟಿಸಿದರು. ದಸರಾ ಹಬ್ಬಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಲಾಗಿದೆ. ದಸರಾ ಆಚರಣೆಗೆ ಸಂಬಂಧಿಸಿದಂತೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಹೇಳಿದರು. ಯಾದಗಿರಿ, ರಾಯಚೂರು, ಕಲಬುರ್ಗಿ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಕೋವಿಡ್‌ ಲಸಿಕೆ ನೀಡುವುದನ್ನು ಹೆಚ್ಚಿಸ ಲಾಗುವುದು. ಅಂತರ ರಾಜ್ಯ ಗಡಿ ಭಾಗದ ಜಿಲ್ಲೆಗಳಲ್ಲಿ ನಿಗಾ ವಹಿಸಲಾಗುವುದು ಎಂದರು.

ರಾತ್ರಿ ಕರ್ಫ್ಯೂ ಸಡಿಲ: ರಾತ್ರಿ ಕರ್ಫ್ಯೂ ಅವಧಿಯನ್ನು ಇನ್ನೂ ಒಂದು ಗಂಟೆ ಸಡಿಲಿಕೆ ಮಾಡಲಾಗಿದೆ. ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಮಾತ್ರ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಬೊಮ್ಮಾಯಿ ಹೇಳಿದರು. ಚಿತ್ರಮಂದಿರ ಶೇ 100ರಷ್ಟು ಆಸನ ಭರ್ತಿಗೆ ಅನುಮತಿ: ಕೋವಿಡ್‌ ದೃಢಪ್ರಮಾಣ ದರ ಶೇ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಅ. 1ರಿಂದ ಚಿತ್ರಮಂದಿರ, ಮಲ್ಟಿಪ್ಲೆಕ್ಸ್‌, ರಂಗಮಂದಿರ, ಸಭಾಂಗಣಗಳಲ್ಲಿ ಪೂರ್ಣ ಪ್ರಮಾಣದ ಆಸನಗಳನ್ನು ಭರ್ತಿಮಾಡಲು ಅನುಮತಿ ನೀಡಲಾಗಿದೆ.

ಕೋವಿಡ್‌ ದೃಢಪ್ರಮಾಣ ದರ ಶೇ1ಕ್ಕಿಂತ ಹೆಚ್ಚಿದ್ದರೆ ಈಗ ಇರುವಂತೆ ಶೇ50ರಷ್ಟು ಆಸನಗಳನ್ನು ಮಾತ್ರ ಭರ್ತಿ ಮಾಡಬೇಕು. ಶೇ2 ಕ್ಕಿಂತ ಹೆಚ್ಚು ಪ್ರಕರಣ ಕಂಡುಬಂದರೆ ಚಿತ್ರಮಂದಿರಗಳನ್ನು ಬಂದ್‌ ಮಾಡಬೇಕು ಎಂದು ಬೊಮ್ಮಾಯಿ ತಿಳಿಸಿದರು. ಗರ್ಭಿಣಿಯರು ಮತ್ತು ಹಿರಿಯ ನಾಗರಿಕರು ಚಿತ್ರಮಂದಿರಗಳಿಗೆ ಬರಬಾರದು. ಚಿತ್ರಮಂದಿರದ ಪ್ರವೇಶ ದ್ವಾರದಲ್ಲಿ ದೇಹದ ಉಷ್ಣಾಂಶ ತಪಾಸಣೆ ನಡೆಸಬೇಕು. ಪ್ರತಿ ಪ್ರದರ್ಶನದ ಬಳಿಕ ಶೌಚಾಲಯಗಳೂ ಸೇರಿದಂತೆ ಇಡೀ ಚಿತ್ರಮಂದಿರವನ್ನು ಸ್ವಚ್ಛಗೊಳಿಸಬೇಕು ಎಂದು ಶುಕ್ರವಾರ ಹೊರಡಿಸಿರುವ ಕೋವಿಡ್‌ ನಿಯಂತ್ರಣ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago