ಕಾಪು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಉಡುಪಿ ಜಿಲ್ಲೆಯ ವತಿಯಿಂದ “ಉಚಿತ ಬೃಹತ್ ಉದ್ಯೋಗ ಮೇಳವು ಕಾಪು ದಂಡತೀರ್ಥ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.11ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 3ರ ವರೆಗೆ ನಡೆಯಲಿದೆ ಎಂದು ಉದ್ಯೋಗ ಮೇಳದ ರೂವಾರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ತಿಳಿಸಿದರು.
ನಿರುದ್ಯೋಗಿ ಯುವಕ, ಯುವತಿಯರಿಗಾಗಿ ರಾಜ್ಯ ಹಾಗೂ ಸ್ಥಳೀಯ ಸುಮಾರು 50ಕ್ಕಿಂತ ಹೆಚ್ಚಿನ ಪ್ರತಿಷ್ಟಿತ ಕಂಪೆನಿಗಳು, ಸೌದಿಯ ಹೊಟೇಲ್ ಉದ್ಯಮವೂ ಭಾಗವಹಿಸಲಿದೆ. ಸೌದಿಯ ಹೊಟೇಲ್‍ಗೆ 350ಕ್ಕೂ ಅಧಿಕ ಉದ್ಯೋಗಿಗಳ ಅವಶ್ಯಕತೆ ಇದ್ದು, ಇಲ್ಲಿ ನೇಮಕಾತಿ ನಡೆಯಲಿದೆ. ಇದೊಂದು ಜಿಲ್ಲಾ ಮಟ್ಟದ ಮೇಳವಾಗಿದ್ದು, ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ, ಪದವಿಪೂರ್ವ ಕಾಲೇಜಿನ ಮತ್ತು ಪದವಿ ಕಾಲೇಜು, ಐಟಿಐ, ಸ್ನಾತಕೋತ್ತರ ಪದವಿ, ಎಂ.ಬಿ.ಎ. ಇಂಜಿನಿಯರಿಂಗ್, ಇನ್ನಿತರ ಶೈಕ್ಷಣಿಕ ಅರ್ಹತೆ ಪಡೆದ ಉದ್ಯೋಗಾಕಾಂಕ್ಷಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದರು.
ಹತ್ತು ಸಾವಿರ ಉದ್ಯೋಗವಕಾಶ: ಇಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ 45 ವಯೋಮಾನದವರೆಗೆ ಉದ್ಯೋಗವಕಾಶಗಳಿವೆ. ಐಟಿ ಬಿಟಿ, ಆಟೋಮೊಬೈಲ್ ಎಜುಕೇಷನ್, ರಿಟೇಲ್, ಮಾರ್ಕೆಟಿಂಗ್, ಹೌಸ್ ಕೀಪಿಂಗ್, ಪಾರ್ಮಸಿ, ಇನ್ಸೂರೆನ್ಸ್, ಬ್ಯಾಂಕ್ ಲೋನ್, ಬ್ಯಾಂಕಿಂಗ್, ಹೋಟೆಲ್ ಮ್ಯಾನೆಜ್ಮೆಂಟ್, ಇಲೆಕ್ಟ್ರಿಕಲ್ಸ್, ಫಿಟ್ಟರ್, ನಸಿರ್ಂಗ್ ಇತ್ಯಾದಿ ಕ್ಷೇತ್ರಗಳಲ್ಲಿ ಉದ್ಯೋಗ ಲಭಿಸಲಿದೆ.
ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ 10 ಸ್ವವಿವರರಗಳನ್ನು ತರತಕ್ಕದ್ದು, ಒಬ್ಬರಿಗೆ 10 ಸಂಸ್ಥೆಗಳಿಗೂ ಸ್ವವಿವರ ಸಲ್ಲಿಸಬಹುದು. ಅವರ ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಉದ್ಯೋಗ ನೀಡಲಾಗುವುದು ಅಲ್ಲದೆ ಯಾವ ಕಂಪೆನಿಯಲ್ಲಿ ಉದ್ಯೋಗ ಬಯಸುತ್ತಾರೊ ಅದನ್ನು ಪಡೆಯಲು ಅವಕಾಶವಿದ್ದು ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾಯ ಕಂಪೆನಿಗಳು ಕಾರ್ಯಕ್ರಮದ ದಿನದಂದೇ ನೇಮಕಾತಿ ಪತ್ರ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಪ್ರಚಾರ ಸಮಿತಿಯ ಉಪಾಧ್ಯಕ್ಷ ಶ್ರೀನಿವಾಸ್ ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಕುಮಾರ್, ಪ್ರಹರೀಶ್ ಕಿಣಿ, ಜಿತೇಂದ್ರ ಪುಟಾರ್ಡೋ, ಕಾಪು ದಿವಾಕರ ಶೆಟ್ಟಿ, ಡಾ.ಸಂತೋಷ್ ಕುಮಾರ್, ಉಪಸ್ಥಿತರಿದ್ದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…