Featured

ಅ.13ರಂದು ಸುರತ್ಕಲ್ ಗೋವಿಂದದಾಸ ಕಾಲೇಜಿನಲ್ಲಿ ತುಳು ಅಕಾಡೆಮಿ ಸಿರಿಚಾವಡಿ ಪುರಸ್ಕಾರ – Vishwanews24

ಅ.13ರಂದು ಸುರತ್ಕಲ್ ಗೋವಿಂದದಾಸ ಕಾಲೇಜಿನಲ್ಲಿ ತುಳು ಅಕಾಡೆಮಿ ಸಿರಿಚಾವಡಿ ಪುರಸ್ಕಾರ

ಮಂಗಳೂರು: ಅಕಾಡೆಮಿ ವತಿಯಿಂದ ಅಕ್ಟೋಬರ್ 13 ರಂದು ಗೋವಿಂದದಾಸ ಕಾಲೇಜು ಸುರತ್ಕಲ್‍ನಲ್ಲಿ “ಸಿರಿಚಾವಡಿ ಪುರಸ್ಕಾರ” ಕಾರ್ಯಕ್ರಮ ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಅಕಾಡೆಮಿವತಿಯಿಂದ ಗೌರವಿಸಲಾಗುವುದು.

ಕಾರ್ಯಕ್ರಮವನ್ನು ಶ್ರೀ ಶ್ರೀರಂಗ ಹೊಸಬೆಟ್ಟು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್‍ಸಾರ್ ವಹಿಸಿಕೊಳ್ಳಲಿದ್ದಾರೆ. ಸನ್ಮಾನ್ಯ ಶಾಸಕರಾದ ಡಾ| ವೈ. ಭರತ್ ಶೆಟ್ಟಿ ವಿವಿಧ ಕ್ಷೇತ್ರದ ಸಾಧಕರನ್ನು ಪುರಸ್ಕರಿಸಲಿದ್ದಾರೆ. ಹಾಗೂ ಅಕಾಡೆಮಿ ವತಿಯಿಂದ ಕೊಡಲ್ಪಡುವ ಅಕಾಡೆಮಿ ಪ್ರಕಟಿತ ಪುಸ್ತಕಗಳ ತುಳು ಪುಸ್ತಕ ಭಂಡಾರವನ್ನು ರೊ. ಅಶೋಕ್ ಎನ್ ಸುರತ್ಕಲ್. ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕಾಪೆರ್Çೀರೇಟರ್, ವರುಣ್ ಚೌಟ, ಯಕ್ಷಗಾನ ಅಕಾಡೆಮಿ ಸದಸ್ಯ ಶ್ರೀ ಮಾಧವ ಭಂಡಾರಿ, ಕುಳಾಯಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಶ್ರೀ ಸುಧಾಕರ ಪೂಂಜ, ಸುರತ್ಕಲ್ ಕುಲಾಲ ಸಂಘದ ಅಧ್ಯಕ್ಷ ಮೋಹನ್ ಐ ಮೂಲ್ಯ, ಕುಳಾಯಿ, ಬ್ರಹ್ಮಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷ ಶ್ರೀ ಗೋಪಾಲ ಬಂಗೇರ ಕೆ. ಅಗರಿ ಎಂಟರ್‍ಪ್ರೈಸಸ್‍ನ ಮಾಲಕರಾದ ಅಗರಿ ಶ್ರೀ ರಾಘವೇಂದ್ರ ರಾವ್, ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೃಷ್ಣಮೂರ್ತಿ ಹಾಗೂ ಕಾರ್ಯಕ್ರಮದ ಸದಸ್ಯ ಸಂಚಾಲಕ ಅಕಾಡೆಮಿ ಸದಸ್ಯರಾದ ನಾಗೇಶ್ ಕುಲಾಲ್ ಭಾಗವಹಿಸಲಿದ್ದಾರೆ.

 

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

7 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

7 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

7 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

8 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

8 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

8 hours ago