Featured

ಅ.14ರಿಂದ ನ.14ವರೆಗೆ ‘ಯಕ್ಷ ಮೋಹಿನಿ’ ಕೋಳ್ಯೂರು ರಾಮಚಂದ್ರ ರಾಯರಿಗೆ 90ರ ಸಂಭ್ರಮ – Vishwanews24

ಅ.14ರಿಂದ ನ.14ವರೆಗೆ ‘ಯಕ್ಷ ಮೋಹಿನಿ’ ಕೋಳ್ಯೂರಿಗೆ 90ರ ಸಂಭ್ರಮ – Vishwanews24

ಉಡುಪಿ : ಕೋಳ್ಯೂರು ಎಂಬುದು ಒಂದು ಊರಿನ ಹೆಸರು. ಆ ಹೆಸರನ್ನು ಕೇಳಿದ ಕೂಡಲೆ ಕೋಳ್ಯೂರು ರಾಮಚಂದ್ರ ರಾಯರು ಕಣ್ಣೆದುರು ಬರುತ್ತಾರೆ. ಮೋಹಿನಿಯಂಥ ಶೃಂಗಾರ ಪಾತ್ರದಿ0ದ ತೊಡಗಿ, ಚಂದ್ರಮತಿ, ದಮಯಂತಿಯ0ಥ ಕರುಣರಸದ ಪಾತ್ರಗಳನ್ನು ಪ್ರಮೀಳೆ, ಶಶಿಪ್ರಭೆಯಂಥ ವೀರರಸದ ಪಾತ್ರಗಳನ್ನು ಮಾಡಿ, ತುಳು ತಿಟ್ಟಿನಲ್ಲಿ ಬೊಮ್ಮಕ್ಕೆ ನಾಗ್ವಕ್ಕೆಯಂಥ ವಿಭಿನ್ನ ಮನೋಧರ್ಮದ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸಿ ಜನಮಾನಸದಲ್ಲಿ ನಿರಂತರ ವಿಹರಿಸುತ್ತಿರುವ ಕೋಳ್ಯೂರು ರಾಮಚಂದ್ರ ರಾಯರಿಗೆ ಈಗ ನವತ್ಯಬ್ದ ಸಡಗರ. ತೊಂಬತ್ತು ವರ್ಷದ ಜೀವಮಾನವೆಂದರೆ ಸರಳ ಸಂಗತಿಯಲ್ಲ.

ಅವರು ತಮ್ಮ ಕಿಶೋರ ಹರೆಯದಲ್ಲಿ ೬೦ ವರ್ಷದ ಹಿರಿಯ ಕಲಾವಿದರೊಂದಿಗೆ ಒಡನಾಡಿದ ಅನುಭವವನ್ನು ಸಮಗ್ರವಾಗಿ ನೋಡಿದರೆ ಕೋಳ್ಯೂರು ರಾಮಚಂದ್ರ ರಾಯರು ನಮ್ಮೊಂದಿಗೆ ನಡೆದಾಡುತ್ತಿರುವ ೧೫೦ ವರ್ಷಗಳ ಇತಿಹಾಸದ ದಾಖಲೆ ಪುಸ್ತಕ. ಇಂಥ ಯಕ್ಷಗಾನದ ವಿಶ್ವಕೋಶವಾಗಿರುವ ಕೇಂದ್ರ ಸಂಗೀತ ನಾಟಕ ಆಕಾಡೆಮಿ ಪ್ರಶಸ್ತಿ ಪುರಸ್ಕೃತ, ಮಂಗಳೂರು ವಿ.ವಿ ಗೌರವ ಡಾಕ್ಟರೇಟ್ ಪದವಿ ಪಡೆದ ಕೋಳ್ಯೂರು ರಾಮಚಂದ್ರ ರಾಯರನ್ನು
ನವತ್ಯಬ್ದ ಸಂಭ್ರಮದ ನಿಮಿತ್ತ ಸಮ್ಮಾನಿಸಬೇಕೆಂದು ಸಮಾಲೋಚಿಸುತ್ತಿದ್ದೆವು. ಆಗ ಕೋಳ್ಯೂರು ಅವರ ಕುಟುಂಬದ ಪ್ರತಿನಿಧಿಯಾಗಿ ಅವರ ತೃತೀಯ ಪುತ್ರ ಶ್ರೀಧರ ರಾವ್ ಅವರು ನಮ್ಮನ್ನು ಸಂಪರ್ಕಿಸಿ ಅಭಿನಂದನ ಕಾರ್ಯಕ್ರಮದ ಸಂಪೂರ್ಣ ವೆಚ್ಚವನ್ನು ಮಕ್ಕಳಾದ ನಾವೆಲ್ಲ ಸೇರಿ ಭರಿಸುವುದಾಗಿ ಹೇಳಿದರು. ಹೀಗೆ ಇದರ ಪ್ರಾಯೋಜಕತ್ವ ವಹಿಸಿ ಸಂಸ್ಥೆಗೆ ದೊಡ್ಡ ಸಹಕಾರ ನೀಡಿರುತ್ತಾರೆ.

ಅಕ್ಟೋಬರ್14 ರಿಂದ ನವೆಂಬರ್ರ14 ವರೆಗೆ ಒಂದು ತಿಂಗಳ ಪರ್ಯಾ0ತ ಕಾರ್ಯಕ್ರಮ ಆಯೋಜಿಸಿದ್ದೇವೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪೂಜ್ಯ ಧರ್ಮಾಧಿಕಾರಿಗಳಿಂದ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಎಡನೀರು ಮಠಾಧೀಶರು ನಮಗೆ ಅನುಗ್ರಹ ಮಂತ್ರಾಕ್ಷತೆಯನ್ನು ನೀಡಿದ್ದಾರೆ. ಪ್ರತಿದಿನ
ಒಬ್ಬೊಬ್ಬ ಮೇರು ಕಲಾವಿದರ ನೆನಪಿಗೆ ಕಾರ್ಯಕ್ರಮವನ್ನು ಸಮರ್ಪಿಸಲಾಗುತ್ತಿದೆ. ದಿನಕ್ಕೊಬ್ಬರಂತೆ ಕಲಾಪೋಷಕರು, ಮೇಳದ ಯಜಮಾನರು, ಕೋಳ್ಯೂರು ಅವರ ಒಡನಾಡಿ ಕಲಾವಿದರು ಮುಖ್ಯ ಅಭ್ಯಾಗತರಾಗಿ ಪಾಲ್ಗೊಳ್ಳಲಿದ್ದಾರೆ. ಪ್ರತಿದಿನ ಕೋಳ್ಯೂರು ಮುಖ್ಯ ಭೂಮಿಕೆಯಲ್ಲಿರುವ ಆಖ್ಯಾನವನ್ನು ಪ್ರದರ್ಶಿಸಲಾಗುವುದು. ನವಂಬರ್ ೧೪ ರಂದು ಬೆಳಿಗ್ಗೆ ೯ ಗಂಟೆಯಿ0ದ ದಿನಪೂರ್ತಿ ನಡೆಯುವ ಕಾರ್ಯಕ್ರಮದಲ್ಲಿ ಪರ್ಯಾಯ ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮತ್ತು ಸೋದೆ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರ ದಿವ್ಯೋಪಸ್ಥಿತಿಯಲ್ಲಿ ಈ ಕಾರ್ಯಕ್ರಮಗಳು ಜರಗಲಿದೆ. ಹಿರಿಯ ಕಲಾವಿದ ಪೆರ್ವೋಡಿ ನಾರಾಯಣ ಭಟ್ ಕಾರ್ಯಕ್ರಮ ಉದ್ಘಾಟಿಸಲಿದ್ದು ಅಂತರಾಷ್ಟ್ರೀಯ ಮಟ್ಟದ ಕಲಾವಿದರು ಸೇರಿದಂತೆ ಅನೇಕ ಹಿರಿಯ ಕಲಾವಿದರು ಭಾಗವಹಿಸಲಿದ್ದಾರೆ. ಸುಮಾರು ೯೦ ಜನ ಸ್ತ್ರೀ ವೇಷಧಾರಿಗಳನ್ನು ಕೋಳ್ಯೂರು ರಾಮಚಂದ್ರ
ರಾಯರು ಗೌರವಿಸಲಿದ್ದಾರೆ. ಹಿರಿಯ ವಿದ್ವಾಂಸರುಗಳಾದ ಲಕ್ಷ್ಮೀಶ ತೋಳ್ಪಾಡಿ, ಅರುವ ಕೊರಗಪ್ಪ ಶೆಟ್ಟಿ, ಎ. ಪಿ. ಮಾಲತಿ, ಮಂಟಪ
ಪ್ರಭಾಕರ ಉಪಾಧ್ಯ, ಎಚ್. ಎಸ್. ಬಲ್ಲಾಳ್, ಪಿ. ಎಸ್. ಎಡಪಡಿತ್ತಾಯ, ಪದ್ಮಾ ಸುಬ್ರಹ್ಮಣ್ಯಂ, ವಿದ್ವಾನ್ ಪಪ್ಪು, ವೇಣುಗೋಪಾಲ್, ಕಲಾಮಂಡಲ
ಗೋಪಿ, ರಾಜ್ ಕೆ. ಶೆಟ್ಟಿ, ಪೆರುವೋಡಿ ನಾರಾಯಣ ಭಟ್ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.

ಇದೇ ಸಂದರ್ಭದಲ್ಲಿಕೋಳ್ಯೂರ್‌ರ ಕುರಿತಾದ ಗ್ರಂಥ ಪ್ರಕಟಣೆಗೊಳ್ಳಲಿದೆ. ಹಿರಿಯ ವಿದ್ವಾಂಸರ ಮತ್ತು ಯುವ ಕಲಾವಿದರ ಘೋಷ್ಠಿ
ಸಂಪನ್ನಗೊಳ್ಳಲಿದೆ. ಕೊನೆಯಲ್ಲಿ ಕಥಕಳಿ-ಯಕ್ಷಗಾನ ಜುಗಲ್‌ಬಂದಿ ಕಲಾಕಾರ್ಯಕ್ರಮ ಪ್ರಸ್ತುತಗೊಳ್ಳಲಿದೆ. ಪ್ರತಿದಿನದ ಕಾರ್ಯಕ್ರಮಗಳು ಯೂ-ಟ್ಯೂಬ್ ಸ್ಟ್ರೀಮ್ ನಲ್ಲಿ ಪ್ರಸಾರಗೊಳ್ಳಲಿದೆ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

8 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

9 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

9 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

9 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

9 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

11 hours ago