Featured

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’

ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ ಕಾರ್ಯಕ್ರಮ

ಕಾಪು: ರಕ್ಷಣಾಪುರ ಜವನೆರ್ ಕಾಪು ತಂಡದ ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ ಸೀಸನ್–4’ ಕಾರ್ಯಕ್ರಮವನ್ನು ಅಕ್ಟೋಬರ್ 18ರಂದು ಕಾಪು ಹೊಸ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರ ಮಾರ್ಗದರ್ಶನದಲ್ಲಿ ನಡೆಯಲಿದೆ ಕಾರ್ಯಕ್ರಮದ ಅಧ್ಯಕ್ಷ ನವೀನ್ ಎನ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವಿನಯ್ ಕುಮಾರ್ ಸೊರಕೆ ಮಾತನಾಡುತ್ತಾ ” ಕಾಪು ಎಂಬುದ ಒಂದು ದೊಡ್ಡ ಶಬ್ದ ನಮ್ಮನೆಲ್ಲ ಕಾಯುವ ಮೂರು ತಾಯಿ ನೆಲೆಯಾಗಿರುವ ಪುಣ್ಯ ಭೂಮಿ ಹಾಗಾಗಿ ಈ ಜಾಗದಲ್ಲಿ ನಮ್ಮ ತುಳುನಾಡಿನ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಪ್ರಯತ್ನ “ಪಿಲಿಪರ್ಬ” ಕಾರ್ಯಕ್ರಮ ನಮ್ಮದಾಗಿದೆ ಎಂದರು,

ಅಂದು ಮಧ್ಯಾಹ್ನ 3.30ರಿಂದ ಕಾರ್ಯಕ್ರಮ ಆರಂಭವಾಗಲಿದ್ದು, ಹುಲಿವೇಷ ತಂಡಗಳ ಪ್ರದರ್ಶನ ಹಾಗೂ ಸ್ಪರ್ಧೆ , ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಂಘಟಕರು ತಿಳಿಸಿದರು.

ಇದರೊಂದಿಗೆ ವೈಯಕ್ತಿಕ ವಿಭಾಗಗಳಲ್ಲಿಯೂ ವಿಶೇಷ ಬಹುಮಾನಗಳನ್ನು ನೀಡಲಾಗುತ್ತದೆ. ಅತ್ಯುತ್ತಮ ಹುಲಿವೇಷ, ಅತ್ಯುತ್ತಮ ಹುಲಿ ಕುಣಿತಗಾರ,ಅತ್ಯುತ್ತಮ ಕರಿಹುಲಿ, ಕಾಸ್ಟ್ಯೂಮ್ ಹಾಗೂ ಇತರ ವಿಭಾಗಗಳಲ್ಲಿ ಬಹುಮಾನಗಳನ್ನು ವಿತರಿಸಲಾಗುವುದು. ಅಲ್ಲದೆ, ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳೂ ನಡೆಯಲಿವೆ.

ಕಾಪು ಪರಿಸರದ ಹುಲಿವೇಷ ಕಲೆಯನ್ನು ಪ್ರೋತ್ಸಾಹಿಸುವುದು, ಕಲಾವಿದರಿಗೆ ವೇದಿಕೆ ಕಲ್ಪಿಸುವುದು ಹಾಗೂ ಜನರಲ್ಲಿ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರತಿಷ್ಠಾನದ ವತಿಯಿಂದ ಮನವಿ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಪ್ರಥಮ ಬಹುಮಾನವಾಗಿ ₹2 ಲಕ್ಷ, ದ್ವಿತೀಯ ಬಹುಮಾನವಾಗಿ ₹1 ಲಕ್ಷ, ತೃತೀಯ ಬಹುಮಾನವಾಗಿ ₹50,000 ಹಾಗೂ ಚತುರ್ಥ ಬಹುಮಾನವಾಗಿ ₹30,000 ನಗದು ಬಹುಮಾನಗಳನ್ನು ಘೋಷಿಸಲಾಗಿದೆ.

ಹುಲಿವೇಷ ತಂಡಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕಾರ ನೀಡುವಂತೆ ತಿಳಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಸಂಘಟಕರು ಸಿದ್ಧತೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ 9964026471, 9900555542, 9742020972 ಹಾಗೂ 9901259323 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ ಸುಕುಮಾರ್,ಸಂಘಟಕ ಗಣೇಶ್, ಸುಧಿರ್ ಹೆಜಮಾಡಿ ಉಪಸ್ಥಿತರಿದ್ದರು.

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

30 minutes ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

40 minutes ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

43 minutes ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

48 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

16 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

1 day ago