ನವದೆಹಲಿ : ಆಂಧ್ರದ ಕರಾವಳಿಗೆ ಅಕ್ಟೋಬರ್ 28ರಂದು ಮೊಂಥಾ ಚಂಡಮಾರುತ ಅಪ್ಪಳಿಸಲಿದ್ದು, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಭೂಕುಸಿತ ಸಂಭವಿಸುವ ಸಾಧ್ಯತೆಗಳಿರುವ ಕಾರಣ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು ಚಂಡಮಾರುತವಾಗಿ ರೂಪುಗೊಂಡಿದೆ.
ಆಂಧ್ರಪ್ರದೇಶದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರಾಜ್ಯದ 26 ಜಿಲ್ಲೆಗಳಲ್ಲಿ 23 ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರಾಕಾರ ಮಳೆ, ಅತಿ ವೇಗದ ಗಾಳಿ ಮತ್ತು ಸಂಭವನೀಯ ಪ್ರವಾಹದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.
ಒಡಿಶಾ ಸರ್ಕಾರವು ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಕಾಲೇಜುಗಳನ್ನು ಅಕ್ಟೋಬರ್ 30, 2025 ರವರೆಗೆ ಮುಚ್ಚುವುದಾಗಿ ಘೋಷಿಸಿದೆ. ಆಂಧ್ರಪ್ರದೇಶದ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ನಿರ್ದೇಶಿಸಲಾಗಿದೆ. ಕಾಕಿನಾಡ, ಕೋನ ಸೀಮಾ, ಎಲುರು, ಪಶ್ಚಿಮ ಗೋದಾವರಿ, ಕೃಷ್ಣ, ಗುಂಟೂರು, ಬಾಪಟ್ಲಾ, ಪ್ರಕಾಶಂ ಮತ್ತು ಎಸ್‌ಪಿಎಸ್‌ಆರ್ ನೆಲ್ಲೂರು ಸೇರಿದಂತೆ ಜಿಲ್ಲೆಗಳಿಗೆ ಈ ಎಚ್ಚರಿಕೆ ಜಾರಿಯಲ್ಲಿದೆ .ಅಕ್ಟೋಬರ್ 27 ಮತ್ತು 28 ರಂದು ತಮಿಳುನಾಡು ಮತ್ತು ಪುದುಚೇರಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ.
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…