Featured

ಅ. 28ರಂದು ಮೊಂಥಾ ಚಂಡಮಾರುತ : ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್ ಘೋಷಣೆ  – viswhanews24

ಅ. 28ರಂದು ಮೊಂಥಾ ಚಂಡಮಾರುತ : ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್ ಘೋಷಣೆ

ನವದೆಹಲಿ : ಆಂಧ್ರದ ಕರಾವಳಿಗೆ ಅಕ್ಟೋಬರ್ 28ರಂದು ಮೊಂಥಾ ಚಂಡಮಾರುತ ಅಪ್ಪಳಿಸಲಿದ್ದು, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿನಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಭೂಕುಸಿತ ಸಂಭವಿಸುವ ಸಾಧ್ಯತೆಗಳಿರುವ ಕಾರಣ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು ಚಂಡಮಾರುತವಾಗಿ ರೂಪುಗೊಂಡಿದೆ.

ಆಂಧ್ರಪ್ರದೇಶದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರಾಜ್ಯದ 26 ಜಿಲ್ಲೆಗಳಲ್ಲಿ 23 ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಧಾರಾಕಾರ ಮಳೆ, ಅತಿ ವೇಗದ ಗಾಳಿ ಮತ್ತು ಸಂಭವನೀಯ ಪ್ರವಾಹದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಒಡಿಶಾ ಸರ್ಕಾರವು ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಕಾಲೇಜುಗಳನ್ನು ಅಕ್ಟೋಬರ್ 30, 2025 ರವರೆಗೆ ಮುಚ್ಚುವುದಾಗಿ ಘೋಷಿಸಿದೆ. ಆಂಧ್ರಪ್ರದೇಶದ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ನಿರ್ದೇಶಿಸಲಾಗಿದೆ. ಕಾಕಿನಾಡ, ಕೋನ ಸೀಮಾ, ಎಲುರು, ಪಶ್ಚಿಮ ಗೋದಾವರಿ, ಕೃಷ್ಣ, ಗುಂಟೂರು, ಬಾಪಟ್ಲಾ, ಪ್ರಕಾಶಂ ಮತ್ತು ಎಸ್‌ಪಿಎಸ್‌ಆರ್ ನೆಲ್ಲೂರು ಸೇರಿದಂತೆ ಜಿಲ್ಲೆಗಳಿಗೆ ಈ ಎಚ್ಚರಿಕೆ ಜಾರಿಯಲ್ಲಿದೆ .ಅಕ್ಟೋಬರ್ 27 ಮತ್ತು 28 ರಂದು ತಮಿಳುನಾಡು ಮತ್ತು ಪುದುಚೇರಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್​ ಘೋಷಿಸಿದೆ.

Vishwa News 24

Recent Posts

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 hour ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 hour ago

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…

1 hour ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

3 hours ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

23 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

24 hours ago