Featured

ಅ.28ರಿಂದ ನ.6ರವರಗೆ ಹಾಸನಾಂಬ ದರ್ಶನ: ಈ ಬಾರಿಯೂ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ – Vishwanews24

ಅ.28ರಿಂದ ನ.6ರವರಗೆ ಹಾಸನಾಂಬ ದರ್ಶನ: ಈ ಬಾರಿಯೂ ಸಾರ್ವಜನಕರಿಗೆ ಅವಕಾಶ ಇಲ್ಲ – Vishwanews24

ಹಾಸನ : ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ನಂದದ ನಂದಾದೀಪ ಪ್ರಸಿದ್ಧಿಯ ಹಾಸನಾಂಬೆ ದೇಗುಲದ ಬಾಗಿಲು ಅ.28ರ ಗುರುವಾರ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ, ಸಮ್ಮುಖದಲ್ಲಿ ಚಾಲನೆ ದೊರೆಯಲಿದೆ.ನ.6ರ ತನಕ ಬಾಗಿಲು ತೆರೆದಿರುತ್ತದೆಯಾದರೂ, ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

ಹಾಸನಾಂಬೆ ದೇಗುಲದ ಬಾಗಿಲು ತೆರೆಯುವ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾಧಿಕಾರಿ ಮತ್ತಿತರ ಅಧಿಕಾರಿಗಳು, ದೇಗುಲದ ಪ್ರಧಾನ ಅರ್ಚಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.

ಕಳೆದ ವರ್ಷದಂತೆ ಈ ಬಾರಿಯೂ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದ್ದು, ನಗರದ ಪ್ರಮುಖ ರಸ್ತೆಯಲ್ಲಿ ಎಲ್‌ಇಡಿ ಸ್ಕ್ರೀನ್ ಹಾಗೂ ಆನ್‌ಲೈನ್ ಮೂಲಕ ದರ್ಶನಾವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ಪ್ರಥಮ ದಿನವಾದ ಅ.28 ರಂದು ದರ್ಶನಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಆಹ್ವಾನಿಸಲಾಗುವುದು ಎಂದು ಸಚಿವರು ತಿಳಿಸಿದರು.

ಪ್ರತಿ ವರ್ಷದಂತೆ ಈ ಬಾರಿಯೂ ಪೂಜಾ ವಿಧಿ ವಿಧಾನ ನಡೆಯಲಿದೆ, ನಗರವನ್ನು ವಿದ್ಯುತ್ ದೀಪಾಲಂಕಾರ ಮಾಡಿ ಸಿಂಗರಿಸಲಾಗುವುದು ಕೊರೊನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಭಕ್ತರು ಸಹಕರಿಸಬೇಕು ಎಂದು ಮನವಿ ಮಾಡಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

21 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

22 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

23 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

23 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

23 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago