ಹಾಸನ: ಈ ಬಾರಿಯ ಪ್ರಸಿದ್ಧ ಹಾಸನಾಂಬಾ ಜಾತ್ರಾ ಮಹೋತ್ಸವವು ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಸಡಗರದಿಂದ ನಡೆಯಲಿದೆ. ಜಾತ್ರಾ ಮಹೋತ್ಸವವನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಈಗಾಗಲೇ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಹಾಗೂ ಪೂರ್ವಸಿದ್ದತೆಗಳನ್ನು ಮಾಡಿಕೊಂಡಿದೆ ಎಂದು ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಮಾಹಿತಿ ನೀಡಿದ್ದಾರೆ.
ಅಕ್ಟೋಬರ್ 29ರಂದು ಗರ್ಭಗುಡಿ ಬಾಗಿಲು ಓಪನ್, ನ. 10ರವರೆಗೆ ದರ್ಶನ: ಆಶ್ವಯುಜ ಮಾಸದ ಪವಿತ್ರ ದಿನವಾದ ಅಕ್ಟೋಬರ್ 29ರ ಗುರುವಾರ ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಿದೆ. ಧಾರ್ಮಿಕ ವಿಧಿವಿಧಾನಗಳು ನಡೆಯುವ ಕಾರಣ ಮೊದಲ ದಿನ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶವಿರುವುದಿಲ್ಲ. ಮಾರನೇ ದಿನದಿಂದ, ಅಂದರೆ ಅಕ್ಟೋಬರ್ 30ರಿಂದ ನವೆಂಬರ್ 10ರವರೆಗೆ ಒಟ್ಟು 12 ದಿನಗಳ ಕಾಲ ಭಕ್ತಾದಿಗಳಿಗೆ ದೇವಿ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ತದನಂತರ ನವೆಂಬರ್ 11ರಂದು ಧಾರ್ಮಿಕ ಪೂಜಾ ವಿಧಿವಿಧಾನಗಳೊಂದಿಗೆ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಗುತ್ತದೆ.
ಜಾತ್ರಾ ಮಹೋತ್ಸವದ ಯಶಸ್ವಿ ನಿರ್ವಹಣೆಗಾಗಿ ಈಗಾಗಲೇ ಹಲವು ಕಾರ್ಯಕಾರಿ ಸಮಿತಿಗಳನ್ನು ರಚಿಸಲಾಗಿದೆ. ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಮನರಂಜನೆ ನೀಡಲು ಮತ್ತು ಸ್ಥಳೀಯ ಕಲೆ-ಸಂಸ್ಕೃತಿಯನ್ನು ಪೋಷಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇದರ ಭಾಗವಾಗಿ ಆಹಾರ ಮೇಳ, ಚಿತ್ರಸಂತೆ, ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ವೈಭವದ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ತಲುಪಿಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.
ಶಾರ್ಜಾದಲ್ಲಿ ಹತ್ಯೆಯಾದ ಉಡುಪಿ ಮೂಲದ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಭಾರತಕ್ಕೆ ತರಲು ಯತ್ನ: ಕೋಟ ಶ್ರೀನಿವಾಸ ಪೂಜಾರಿ ಉಡುಪಿ…
ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮೀ ಯೋಜನೆ’ಯ ಅರ್ಹ ಫಲಾನುಭವಿಗಳನ್ನು ಗುರುತಿಸಲು…
ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ವಿಟ್ಲ: ಕೇರಳ…
ಉಡುಪಿ : ಮಾದಕ ವಸ್ತು ಮಾರಾಟ ಪ್ರಕರಣ: 9 ಮಂದಿ ಆರೋಪಿಗಳ ಬಂಧನ ಉಡುಪಿ : ಶಿರ್ವ ಮತ್ತು ಉಡುಪಿ…
ಮಂಗಳೂರು : ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಸೆರೆ ಮಂಗಳೂರು : ಕೊಲೆ ಪ್ರಕರಣದ ಆರೋಪಿಯೊಬ್ಬ ಪೊಲೀಸರ ವಶದಿಂದ…
ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಗೌರವ ಸನ್ಮಾನ ನಮ್ಮ ಊರು ಸ್ವಚ್ಛವಾಗಿರಲು, ನಮ್ಮ ಪರಿಸರ ಆರೋಗ್ಯಕರವಾಗಿರಲು ಪ್ರತಿದಿನವೂ ಮೌನವಾಗಿ ಶ್ರಮಿಸುವ ಪೌರಕಾರ್ಮಿಕರ…