ಉಡುಪಿ: ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಾಟ ಟೆಂಪೋ ಹಾಗೂ ಲಾರಿ ಮಾಲಕರ ಒಕ್ಕೂಟವು ಅ.3ರಂದು ಉಡುಪಿ ಜಿಲ್ಲಾ ಬಂದ್‌ಗೆ ನೀಡಿರುವ ಕರೆ ಕಾನೂನು ಬಾಹಿರ, ಸಂವಿಧಾನ ವಿರೋಧಿಯಾಗಿದ್ದು, ಈ ರೀತಿಯ ಬಂದ್ ಹಾಗೂ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ತಿಳಿಸಿದ್ದಾರೆ.
ಯಾವುದೇ ಬಂದ್‌ಗೆ ಕರೆ ನೀಡುವುದು, ಕಾನೂನು ಬಾಹಿರ ಮತ್ತು ಸಂವಿಧಾನ ವಿರೋಧಿ ಮತ್ತು ಜನಸಾಮಾನ್ಯರ ಮೂಲಭೂತ ಹಕ್ಕು ವಿರೋಧಿ ಎಂದು ಕೇರಳ ಹೈಕೋರ್ಟ್ ಈ ಹಿಂದೆ ತನ್ನ ತೀರ್ಪಿನಲ್ಲಿ ತಿಳಿಸಿದೆ. ಈ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯವು ಎತ್ತಿ ಹಿಡಿದಿತ್ತು. ಆದುದರಿಂದ ಜನಸಾಮಾನ್ಯರ ಮೂಲಭೂತ ಹಕ್ಕು ಚ್ಯುತಿಗೊಳಿಸುವ ಯಾವುದೇ ರೀತಿಯ ಬಂದ್‌ಗೆ ಅಥವಾ ಅದಕ್ಕೆ ಸಂಬಂಧಿಸಿದ ಇತರೇ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ. ಉಡುಪಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಹಮ್ಮಿಕೊಳ್ಳಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…