ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು ನಿಲ್ದಾಣಗಳ ನಡುವೆ ಕಾಮಗಾರಿಗಳಿಗಾಗಿ ಲೈನ್ ಬ್ಲಾಕ್ ಇರುವುದರಿಂದ ಬೆಂಗಳೂರು – ಮಂಗಳೂರು ನಡುವೆ ಹಲವು ರೈಲುಗಳ ಸಂಚಾರ ರದ್ದುಗೊಳಿಸಲಾಗುತ್ತದೆ.
ವಾರದಲ್ಲಿ ಮೂರು ದಿನ ಸಂಚರಿಸುವ ಯಶವಂತಪುರ – ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ (ಸಂಖ್ಯೆ 16575) ರೈಲು ಅ.4, 6, 8, 11,13,15, 22, 25, 27, 29 ಮತ್ತು ನ.1, 3ರಂದು ಸಂಚರಿಸುವುದಿಲ್ಲ. ಮಂಗಳೂರು ಜಂಕ್ಷನ್ – ಯಶವಂತಪುರ ಎಕ್ಸ್‌ಪ್ರೆಸ್ (ಸಂಖ್ಯೆ 16576 ) ರೈಲು ಅ. 5, 7, 9, 12, 14, 16, 23, 26, 28, 30 ಮತ್ತು ನ.2, 4 ರಂದು ಸಂಚರಿಸುವುದಿಲ್ಲ.
ಇದನ್ನೂ ಓದಿ :
ವಾರದಲ್ಲಿ ಮೂರು ದಿನ ಸಂಚರಿಸುವ ಯಶವಂತಪುರ – ಕಾರವಾರ ಎಕ್ಸ್‌ಪ್ರೆಸ್ ( ಸಂಖ್ಯೆ 16515) ರೈಲಿನ ಸಂಚಾರ ಅ.5, 7, 9, 12, 14, 21, 23, 26, 28, 30, ನ.2ರಂದು ರದ್ದುಪಡಿಸಲಾಗಿದೆ.
ಕಾರವಾರ -ಯಶವಂತಪುರ ಎಕ್ಸ್‌ಪ್ರೆಸ್ (ಸಂಖ್ಯೆ 16516 ) ರೈಲು ಅ. 6, 8, 10, 13, 15, 22, 24, 27, 29, 31 ಮತ್ತು ನ. 3ರಂದು ಸಂಚರಿಸುವುದಿಲ್ಲ.
ಯಶವಂತಪುರ – ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ಸಂಖ್ಯೆ 16539 ) ರೈಲು ಸಂಚಾರ ಅ.10, 24, 31ರಂದು ರದ್ದುಗೊಳ್ಳಲಿದೆ. ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ (ಸಂಖ್ಯೆ 16540) ರೈಲು ಸಂಚಾರ ಅ. 11, 25, ಮತ್ತು ನ.1ರಂದು ರದ್ದುಗೊಳ್ಳಲಿದೆ ಎಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಜುನಾಥ ಕನಮಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ :
ಪ್ರಯಾಣಿಕರಿಗೆ ಮುನ್ನೆಚ್ಚರಿಕೆ: ಶಿರಿಬಾಗಿಲು–ಎಡಕುಮಾರಿ ನಡುವಿನ ಹಳಿ ನಿರ್ವಹಣೆ ಹಾಗೂ ಎಂಜಿನಿಯರಿಂಗ್ ಕಾಮಗಾರಿಗಳ ಹಿನ್ನೆಲೆ ಈ ಸಂಚಾರ ಬದಲಾವಣೆ ಮಾಡಲಾಗಿದೆ. ಹೀಗಾಗಿ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ಈ ರೈಲುಗಳಲ್ಲಿ ಪ್ರಯಾಣಿಸಲು ಯೋಜಿಸಿರುವ ಪ್ರಯಾಣಿಕರು ತಮ್ಮ ಪ್ರಯಾಣದ ದಿನಾಂಕಕ್ಕೆ ಅನುಗುಣವಾಗಿ ರೈಲು ಸಂಚಾರದ ಸ್ಥಿತಿಯನ್ನು ಮುಂಚಿತವಾಗಿ ಪರಿಶೀಲಿಸಿ ಪ್ರಯಾಣ ಯೋಜನೆ ರೂಪಿಸಬೇಕಾಗಿದೆ. ಹಳಿ ನಿರ್ವಹಣೆ ಮತ್ತು ಎಂಜಿನಿಯರಿಂಗ್ ಕಾಮಗಾರಿಗಳು ಪೂರ್ಣಗೊಂಡ ಬಳಿಕ ರೈಲುಗಳ ಸಂಚಾರ ಎಂದಿನಂತೆ ಮುಂದುವರಿಯಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…