Featured

ಅ.5ರಂದು ನಾಡೋಜ ಡಾ| ಜಿ. ಶಂಕರ್‌ 69ನೇ ಹುಟ್ಟುಹಬ್ಬ ; ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಚಂಡಿಕಾಯಾಗ – vishwanews24

ಅ.5ರಂದು ನಾಡೋಜ ಡಾ| ಜಿ. ಶಂಕರ್‌ 69ನೇ ಹುಟ್ಟುಹಬ್ಬ ; ಉಚ್ಚಿಲ ದೇವಸ್ಥಾನದಲ್ಲಿ ಚಂಡಿಕಾಯಾಗ

ಮಲ್ಪೆ: ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ನ ಪ್ರವರ್ತಕ ನಾಡೋಜ ಡಾ| ಜಿ. ಶಂಕರ್‌ ಅವರ 69ನೇ ಹುಟ್ಟುಹಬ್ಬದ ಪ್ರಯುಕ್ತ ಅ. 5ರಂದು ಜಿಲ್ಲಾ ಮೊಗವೀರ ಯುವ ಸಂಘಟನೆಯ ವಿವಿಧ ಘಟಕ ವ್ಯಾಪ್ತಿಯಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಬೈಂದೂರು-ಶಿರೂರು, ಹೆಮ್ಮಾಡಿ, ಕುಂದಾಪುರ ಕೋಟೇಶ್ವರ, ಕೋಟ, ಸಾಲಿಗ್ರಾಮ, ಹಾಲಾಡಿ, ಮಂದಾರ್ತಿ, ಬ್ರಹ್ಮಾವರ, ಕೋಡಿಬೆಂಗ್ರೆ, ಪಡುತೋನ್ಸೆ ಬೆಂಗ್ರೆ, ಹಿರಿಯಡಕ, ಮಲ್ಪೆ, ಉಪ್ಪೂರು, ಬೆಳ್ಳಂಪಳ್ಳಿ, ಉದ್ಯಾವರ, ದೊಡ್ಡಣಗುಡ್ಡೆ ಘಟಕಗಳಲ್ಲಿ ಅಶಕ್ತರಿಗೆ ಅನಾರೋಗ್ಯ ಪೀಡಿತರಿಗೆ ಧನಸಹಾಯ, ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಹಾಗೂ ಶಾಲಾ ಮಕ್ಕಳಿಗೆ ಸಿಹಿ ತಿಂಡಿ ಹಾಗೂ ಊಟದ ವ್ಯವಸ್ಥೆ, ಕಲಿಕಾ ಸಾಮಗ್ರಿ, ದಿನಸಿ ಸಾಮಗ್ರಿ, ಬಡ ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗುವುದು. ಜತೆಗೆ ಗೋ ಶಾಲೆಗೆ ಮೇವು ಮತ್ತು ಪಶು ಆಹಾರ ನೀಡಲಾಗುವುದು ಎಂದು ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಜಯಂತ್‌ ಅಮೀನ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಚ್ಚಿಲ ದೇವಸ್ಥಾನದಲ್ಲಿ ಚಂಡಿಕಾಯಾಗ
ಡಾ| ಜಿ. ಶಂಕರ್‌ ಹುಟ್ಟುಹಬ್ಬದ ಸಲುವಾಗಿ ಅ. 5ರಂದು ಮಧ್ಯಾಹ್ನ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ದೇಗುಲದ ಆಡಳಿತ ಸಮಿತಿ ವತಿಯಿಂದ ಮಧ್ಯಾಹ್ನ ಚಂಡಿಕಾಹೋಮ ಸಹಿತ ವಿಶೇಷ ಪೂಜೆ ನಡೆಯಲಿದೆ ಎಂದು ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ತಿಳಿಸಿದ್ದಾರೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

2 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

8 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

9 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

9 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

11 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

11 hours ago