ಹಾಸನ: ಈ ಬಾರಿಯ ಹಾಸನಾಂಬೆ ಜಾತ್ರೆ ಅ.9 ರಿಂದ 23ರವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಹಿನ್ನೆಲೆ ಮಂಗಳವಾರ (ಆ.26) ಹಾಸನ ಜಿ.ಪಂ ಹೊಯ್ಸಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯಿತು. ಈ ವೇಳೆ ದರ್ಶನದ ಪಾಸ್ ಸೇರಿದಂತೆ ಹಲವು ನಿಯಮಗಳಲ್ಲಿ ಬದಲಾವಣೆ ತರಲಾಗಿದೆ.
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರ ನೇತೃತ್ವದಲ್ಲಿ ಶ್ರೀ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ನಡೆದಿದ್ದು, ಶಾಸಕರುಗಳಾದ ಕೆ.ಎಂ.ಶಿವಲಿಂಗೇಗೌಡ, ಎಚ್.ಪಿ.ಸ್ವರೂಪ್ ಪ್ರಕಾಶ್, ಸಿಮೆಂಟ್ ಮಂಜು, ಡಿಸಿ ಕೆ.ಎಸ್.ಲತಾಕುಮಾರಿ, ಎಸ್ಪಿ ಮಹಮದ್ ಸುಜೇತಾ, ಮೇಯರ್ ಹೇಮಲತಾ ಹಾಗೂ ಇತರೆ ಅಧಿಕಾರಿಗಳು ಭಾಗಿಯಾಗಿದ್ದರು.
2025ರ ಹಾಸನಾಂಬೆ ಜಾತ್ರಾ ಮಹೋತ್ಸವ ಅ.9 ರಿಂದ ಅ.23ರವರೆಗೆ ನಡೆಯಲಿದ್ದು, ಅ.9ರಂದು ಹಾಸನಾಂಬ ದೇವಿ ಗರ್ಭಗುಡಿ ಬಾಗಿಲು ತೆರೆಯಲಿದೆ. ಬಳಿಕ ಅ.23ರಂದು ಗರ್ಭಗುಡಿ ಬಾಗಿಲು ಮುಚ್ಚಲಿದೆ. ಅ.10ರಿಂದ ಅ.22ರವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶವಿರುತ್ತದೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳು ಸಂಪೂರ್ಣ ರದ್ದುಗೊಳಿಸಿ, ಹೊಸದಾಗಿ ಗೋಲ್ಡ್ ಪಾಸ್ ವಿತರಣೆ ಮಾಡಲಾಗುವುದು. ಈ ಗೋಲ್ಡ್ ಪಾಸ್ ಪಡೆದರೆ ಮುಂಜಾನೆ 5 ರಿಂದ 11 ಗಂಟೆಯವರೆಗೆ ದರ್ಶನ ಪಡೆಯಬಹುದಾಗಿದೆ. ಒಂದು ಗೋಲ್ಡ್ ಪಾಸ್‌ಗೆ ಒಬ್ಬರಿಗೆ ಮಾತ್ರ ಅವಕಾಶವಿರುತ್ತದೆ ಎಂದು ಉಪವಿಭಾಗಾಧಿಕಾರಿ ಹಾಗೂ ದೇವಾಲಯದ ಆಡಳಿತಾಧಿಕಾರಿ ಮಾರುತಿ ಅವರು ಹೇಳಿದ್ದಾರೆ.
ಇನ್ನೂ ಕೊನೆಯ ಐದು ದಿನ ಎಲ್ಲಾ ಶಿಷ್ಟಾಚಾರ ರದ್ದುಗೊಳಿಸಲಾಗುವುದು, ಸಿಎಂ, ಡಿಸಿಎಂ, ಸಿಜೆ ಮಾತ್ರ ಶಿಷ್ಟಾಚಾರದ ವಾಹನ ಬಳಸಬಹುದು. ಉಳಿದವರು ಪ್ರವಾಸಿ ಮಂದಿರದಲ್ಲಿ ವಾಹನ ನಿಲ್ಲಿಸಿ, ಜಿಲ್ಲಾಡಳಿತ ಆಯೋಜಿಸಿರುವ ವಾಹನದಲ್ಲಿ ಬಂದು ದೇವಿ ದರ್ಶನ ಪಡೆಯಲು ಅವಕಾಶವಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಈ ವೇಳೆ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ರಾಜ್ಯದ ಎಲ್ಲೆಲ್ಲಿಂದಲೊ ಜನರು ಹಾಸನಾಂಬೆ ದರ್ಶನಕ್ಕೆ ಬರುತ್ತಾರೆ. ಆದರೆ ವಿವಿಐಪಿ, ವಿಐಪಿ ಭಕ್ತರ ಕಾರಣದಿಂದ ಜನರಿಗೆ ದರ್ಶನಕ್ಕೆ ಸಮಸ್ಯೆ ಆಗುತ್ತದೆ. ಹಾಗಾಗಿ ಅವರನ್ನು ಗಂಟೆಗಟ್ಟಲೆ ನಿಲ್ಲಿಸಿ ಜನರಿಗೆ ತೊಂದರೆ ಕೊಡೋದು ಸರಿಯಲ್ಲ. ಹಾಗಾಗಿ ಈ ಗಣ್ಯ ಸಂಸ್ಕೃತಿ ತಡೆಯಲು ಸಹಕರಿಸಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ನಾನು ಈ ವಿಐಪಿ ಹಾಗೂ ಶಿಷ್ಟಾಚಾರ ಭಕ್ತರಿಗೆ ಸಮಯ ನಿಗದಿ ಮಾಡಿ ಎಂದು ಹೇಳಿದ್ದೇನೆ. ಗೋಲ್ಡ್ ಕಾರ್ಡ್ಗೆ ಎರಡು ಗಂಟೆ, ಶಿಷ್ಟಾಚಾರಕ್ಕೆ ಎರಡು ಗಂಟೆ ಮಾತ್ರ ಸಮಯ ನಿಗದಿ ಮಾಡಿ ಎಂದು ಸಲಹೆ ನೀಡಿದ್ದೇನೆ. ಇದೆಲ್ಲ ಮಾಡಿದರೆ ಜನರಿಗೆ ಅನುಕೂಲ ಆಗುತ್ತದೆ ಎನ್ನುವುದಾದರೆ ಈ ಎಲ್ಲಾ ರೀತಿಯ ಬದಲಾವಣೆ ಮಾಡೋಣ ಎಂದು ತಿಳಿಸಿದ್ದಾರೆ.
ವೀಕೆಂಡ್ನಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆಗೆ ಹೋಗುವವರಿಗೆ ಗುಡ್ನ್ಯೂಸ್: ವಿಶೇಷ ದರ್ಶನದೊಂದಿಗೆ KSTDC ಹೊಸ ಟೂರ್ ಪ್ಯಾಕೇಜ್ ಬೆಂಗಳೂರು: ಕರಾವಳಿ ಕರ್ನಾಟಕದ…
ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ…
ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಉಡುಪಿ: ಪಂಚ ದ್ರಾವಿಡ…
ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…
ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…
ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…