Featured

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ – vishwanews24

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಮಂತ್ರಿಯಾಗಿ ಪವನ್‌ ಕಲ್ಯಾಣ್‌  ಪ್ರಮಾಣ ವಚನ ಸ್ವೀಕಾರ

ಕಾರ್ಯಕ್ರಮದಲ್ಲಿ ಮೋದಿ, ಅಮಿತ್‌ ಶಾ ಭಾಗಿ

ಹೈದರಾಬಾದ್‌: ಆಂಧ್ರಪ್ರದೇಶದನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಮಂತ್ರಿಯಾಗಿ ಪವನ್‌ ಕಲ್ಯಾಣ್‌  ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದರೊಂದಿಗೆ ಚಂದ್ರಬಾಬು ನಾಯ್ಡು 4ನೇ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐಟಿ ಪಾರ್ಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್‌. ಅಬ್ದುಲ್‌ ನಜೀರ್‌ ಪ್ರಮಾಣವಚನ ಬೋಧಿಸಿದರು. ಒಟ್ಟು 23 ಮಂದಿ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ , ಗೃಹ ಸಚಿವ ಅಮಿತ್‌ ಶಾ, ನಟ ರಜನಿಕಾಂತ್‌, ಪವನ್‌ ಕಲ್ಯಾಣ್‌ ಸಹೋದರ ಚಿರಂಜೀವಿ ಸೇರಿದಂತೆ ಸಿನಿಮಾ ತಾರೆಯರು, ಎನ್‌ಡಿಎ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಚಂದ್ರಬಾಬು ನಾಯ್ಡು ಅವರು 1995 ರಿಂದ 1999, 2004 ರಿಂದ 2009 ಹಾಗೂ 2014ರಿಂದ 2019ರ ವರೆಗೆ ಒಟ್ಟು ಮೂರು ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 2019ರ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ ಪಕ್ಷ ಸೋಲು ಕಂಡಿತ್ತು ಜಗನ್‌ ನೇತೃತ್ವದ ಸರ್ಕಾರ ಅಧಿಕಾರ ಏರಿತ್ತು.

ಆಂಧ್ರಪ್ರದೇಶದಲ್ಲಿ ಮೇ 13ರಂದು ಲೋಕಸಭಾ ಚುನಾವಣೆಯ ಜೊತೆಯಲ್ಲೇ ವಿಧಾನಸಭೆಗೂ ಮತದಾನ ನಡೆದಿತ್ತು. ಈ ಚುನಾವಣೆಗೆ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಮೈತ್ರಿಮಾಡಿಕೊಂಡಿದ್ದವು.

ವಿಧಾನಸಭೆಯ 175 ಸ್ಥಾನಗಳ ಪೈಕಿ ಟಿಡಿಪಿ 135, ಜನಸೇನಾ 21, ಬಿಜೆಪಿ 8 ಹಾಗೂ ವೈಎಸ್‌ಆರ್‌ಸಿಪಿ 11 ಸ್ಥಾನಗಳಲ್ಲಿ ಗೆಲುವು ಪಡೆದಿತ್ತು. 25 ಲೋಕಸಭಾ ಕ್ಷೇತ್ರಗಳ ಪೈಕಿ ಟಿಡಿಪಿ 16, ವೈಎಸ್‌ಆರ್‌ಸಿಪಿ 4, ಬಿಜೆಪಿ 3, ಜನಸೇನಾ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago