ಕಾರ್ಕಳ : ಆಕಸ್ಮಿಕ ಬೆಂಕಿಗೆ ಸುಟ್ಟು ಭಸ್ಮವಾದ ಅತ್ತೂರು ಬಸಿಲಿಕಾ ಬಳಿಯ ಮೇಣದ ಬತ್ತಿ ತಯಾರಿಕಾ ಕಾರ್ಖಾನೆ – Vishwanews24
ಕಾರ್ಕಳ : ಅತ್ತೂರು ಬಸಿಲಿಕಾ ಬಳಿಯ ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಬೆಂಕಿ – ಸುಟ್ಟು ಭಸ್ಮವಾದ ಕಾರ್ಖಾನೆ
ಕಾರ್ಕಳ : ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ಉಂಟಾದ ಅಗ್ನಿ ಆಕಸ್ಮಿಕಕ್ಕೆ ಇಡೀ ಕಾರ್ಖಾನೆ ಸುಟ್ಟು ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ಪರ್ಪಲೆಗುಡ್ಡೆ ಎಂಬಲ್ಲಿ ನಡೆದಿದೆ.
ಈ ಘಟನೆಯಲ್ಲಿ ಮೇಣದ ಬತ್ತಿ ತಯಾರಿಕಾ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು ಸುಮಾರು 25 ಲಕ್ಷ ರೂಪಾಯಿಗೂ ಮಿಕ್ಕಿ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಅತ್ತೂರು ಚರ್ಚಿಗೆ ಸೇರಿದ್ದ ಪರ್ಪಲೆ ಗುಡ್ಡದಲ್ಲಿರುವ ಮೇಣದ ಬತ್ತಿ ತಯಾರಿಕಾ ಘಟಕದ ಇಡೀ ಕಟ್ಟಡ, ಯಂತ್ರೋಪಕರಣಗಳು ಹಾಗೂ ಮೇಣದ ಬತ್ತಿ ತಯಾರಿಕೆಗೆ ದಾಸ್ತಾನು ಇರಿಸಲಾಗಿದ್ದ ಅಪಾರ ಪ್ರಮಾಣದ ಮೇಣ ಹಾಗೂ ಉತ್ಪಾದನೆಯಾಗಿದ್ದ ಮೇಣದ ಬತ್ತಿಗಳು ಬೆಂಕಿಯ ಕೆನ್ನಾಲಗೆಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಕರ್ನಾಟಕ ಸೇರಿ ಇಂದಿನಿಂದ 3 ದಿನ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ – Vishwanews24
ಸಾಯಂಕಾಲ ಏಕಾಎಕಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಘಟಕವನ್ನು ವ್ಯಾಪಿಸಿದೆ. ತಕ್ಷಣವೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಸುಮಾರು ಸತತ ಎರಡು ಅಗ್ನಿಶಾಮಕ ವಾಹನಗಳಿಂದ ಸುಮಾರು 03 ಗಂಟೆ ಕಾರ್ಯಾಚರಣೆ ಮಾಡಿ ಬೆಂಕಿಯನ್ನು ನಂದಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ,ಸಿಬ್ಬಂದಿಗಳಾದ ಉದಯ್ ಕುಮಾರ್ ಹೆಗ್ಡೆ ,ಅಚ್ಚುತ್ ಕರ್ಕೇರಾ, ಜಯ ಮೂಲ್ಯ , ಮಹ್ಮ್ಮದ್ ರಫೀಕ್ , ಕೇಶವ್ ,ಸುಜಯ್ ,ಉಮೇಶ್,ಬಸವರಾಜ್,ರವಿಚಂದ್ರ,ವಿನಾಯಕ್ ,ಸಂಜಯ್ ಮತ್ತು ಮುಜಮಿಲ್ ಪಾಲ್ಗೊಂಡಿದ್ದರು.
ಕಾರ್ಕಳ ವಿಧಾನಸಭಾ ಕ್ಷೇತ್ರ : ಕಾಂಗ್ರೆಸ್ ನಿಂದ ಅನಿತಾ ಡಿಸೋಜ ರವರಿಗೆ ಟಿಕೆಟ್ ನೀಡಲು ಮನವಿ – Vishwanews24
