Featured

ಕಾರ್ಕಳ : ಆಕಸ್ಮಿಕ ಬೆಂಕಿಗೆ ಸುಟ್ಟು ಭಸ್ಮವಾದ ಅತ್ತೂರು ಬಸಿಲಿಕಾ ಬಳಿಯ ಮೇಣದ ಬತ್ತಿ ತಯಾರಿಕಾ ಕಾರ್ಖಾನೆ – Vishwanews24

ಕಾರ್ಕಳ : ಅತ್ತೂರು ಬಸಿಲಿಕಾ ಬಳಿಯ ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಬೆಂಕಿ – ಸುಟ್ಟು ಭಸ್ಮವಾದ ಕಾರ್ಖಾನೆ

ಕಾರ್ಕಳ : ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ಉಂಟಾದ ಅಗ್ನಿ ಆಕಸ್ಮಿಕಕ್ಕೆ ಇಡೀ ಕಾರ್ಖಾನೆ ಸುಟ್ಟು ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ಪರ್ಪಲೆಗುಡ್ಡೆ ಎಂಬಲ್ಲಿ ನಡೆದಿದೆ.

ಈ ಘಟನೆಯಲ್ಲಿ ಮೇಣದ ಬತ್ತಿ ತಯಾರಿಕಾ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು ಸುಮಾರು 25 ಲಕ್ಷ ರೂಪಾಯಿಗೂ ಮಿಕ್ಕಿ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಅತ್ತೂರು ಚರ್ಚಿಗೆ ಸೇರಿದ್ದ ಪರ್ಪಲೆ ಗುಡ್ಡದಲ್ಲಿರುವ ಮೇಣದ ಬತ್ತಿ ತಯಾರಿಕಾ ಘಟಕದ ಇಡೀ ಕಟ್ಟಡ, ಯಂತ್ರೋಪಕರಣಗಳು ಹಾಗೂ ಮೇಣದ ಬತ್ತಿ ತಯಾರಿಕೆಗೆ ದಾಸ್ತಾನು ಇರಿಸಲಾಗಿದ್ದ ಅಪಾರ ಪ್ರಮಾಣದ ಮೇಣ ಹಾಗೂ ಉತ್ಪಾದನೆಯಾಗಿದ್ದ ಮೇಣದ ಬತ್ತಿಗಳು ಬೆಂಕಿಯ ಕೆನ್ನಾಲಗೆಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಸಾಯಂಕಾಲ ಏಕಾಎಕಿ ಕಾರ್ಖಾನೆಯಲ್ಲಿ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಘಟಕವನ್ನು ವ್ಯಾಪಿಸಿದೆ. ತಕ್ಷಣವೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಸುಮಾರು ಸತತ ಎರಡು ಅಗ್ನಿಶಾಮಕ ವಾಹನಗಳಿಂದ ಸುಮಾರು 03 ಗಂಟೆ ಕಾರ್ಯಾಚರಣೆ ಮಾಡಿ ಬೆಂಕಿಯನ್ನು ನಂದಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ,ಸಿಬ್ಬಂದಿಗಳಾದ ಉದಯ್ ಕುಮಾರ್ ಹೆಗ್ಡೆ ,ಅಚ್ಚುತ್ ಕರ್ಕೇರಾ, ಜಯ ಮೂಲ್ಯ , ಮಹ್ಮ್ಮದ್ ರಫೀಕ್ , ಕೇಶವ್ ,ಸುಜಯ್ ,ಉಮೇಶ್,ಬಸವರಾಜ್,ರವಿಚಂದ್ರ,ವಿನಾಯಕ್ ,ಸಂಜಯ್ ಮತ್ತು ಮುಜಮಿಲ್ ಪಾಲ್ಗೊಂಡಿದ್ದರು.

 

 

 

 

Vishwa News 24

Recent Posts

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ – vishwanews24

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…

6 hours ago

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ – vishwanews24

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…

6 hours ago

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…

6 hours ago

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…

7 hours ago

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ -vishwanews24

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…

7 hours ago

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…

7 hours ago