Featured

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು – vishwanews24

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು ; ಎಫ್​ಐಆರ್ ದಾಖಲಿಸುವಂತೆ ಒತ್ತಾಯ

ನಟ ಧ್ರುವ ಸರ್ಜಾ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧ್ರುವ ಸರ್ಜಾ ವಿರುದ್ಧ ಮಾತ್ರವೇ ಅಲ್ಲದೆ ಧ್ರುವ ಸರ್ಜಾ ಮ್ಯಾನೇಜರ್, ಅವರ ಕಾರು ಚಾಲಕ ಹಾಗೂ ಅಭಿಮಾನಿಗಳ ವಿರುದ್ಧವೂ ದೂರು ದಾಖಲಾಗಿದೆ. ಧ್ರುವ ಸರ್ಜಾ ವಿರುದ್ಧ ಅವರ ನೆರೆಮನೆಯವರೇ ದೂರು ದಾಖಲು ಮಾಡಿದ್ದಾರೆ. ಅಲ್ಲದೆ ಧ್ರುವ ಸರ್ಜಾ ಹಾಗೂ ಅವರ ಮ್ಯಾನೇಜರ್, ಚಾಲಕನ ಮೇಲೆ ಎಫ್​​ಐಆರ್ ದಾಖಲು ಮಾಡುವಂತೆ ದೂರುದಾರರು ಒತ್ತಾಯಿಸಿದ್ದಾರೆ.

ಮನೋಜ್ ಎಂಬುವರು ಧ್ರುವ ಸರ್ಜಾ ವಿರುದ್ಧ ದೂರು ನೀಡಿದ್ದಾರೆ. ಮನೋಜ್ ಅವರು ಧ್ರುವ ಸರ್ಜಾ ಅವರ ನೆರೆ ಮನೆಯವರೇ ಆಗಿದ್ದು, ಧ್ರುವ ಸರ್ಜಾ ಅವರ ಅಭಿಮಾನಿಗಳ ವರ್ತನೆಯಿಂದ ಬೇಸತ್ತು ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಧ್ರುವ ಸರ್ಜಾ ಅವರ ಮನೆಗೆ ಬರುವ ಅಭಿಮಾನಿಗಳು ರಸ್ತೆಯಲ್ಲಿ, ಮನೆಯ ಮುಂದೆ ಅಡ್ಡಾದಿಡ್ಡಿಯಾಗಿ ಗಾಡಿಗಳನ್ನು ಪಾರ್ಕಿಂಗ್ ಮಾಡುತ್ತಾರೆ. ಕೂಗಾಡುತ್ತಾರೆ, ಕಿರುಚಾಡುತ್ತಾರೆ ಇದರಿಂದ ಸ್ಥಳೀಯರಿಗೆ ಸಮಸ್ಯೆ ಆಗಿದೆ ಎಂದು ಮನೋಜ್ ದೂರಿನಲ್ಲಿ ಆರೋಪಿಸಿದ್ದಾರೆ.

ಅಭಿಮಾನಿಗಳು ಮನೆಯ ಮುಂದೆ ಸಿಗರೇಟು ಸೇದುತ್ತಾರೆ, ಗುಟ್ಕಾ ಉಗಿಯುತ್ತಾರೆ, ಮನೆಯ ಗೋಡೆಗಳ ಮೇಲೆಯೂ ಉಗಿದಿದ್ದಾರೆ, ಗಲಾಟೆ ಮಾಡುತ್ತಾರೆ. ಈ ಬಗ್ಗೆ ನಟನ ಮ್ಯಾನೇಜರ್, ಚಾಲಕನ ಬಳಿ ಹೇಳಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಧ್ರುವ ಸರ್ಜಾ ಅವರ ಅಭಿಮಾನಿಗಳ ಉಪಟಳದಿಂದ ಸಮಸ್ಯೆ ಆಗಿದೆ ಎಂದು ಮನೋಜ್ ಹೇಳಿದ್ದಾರೆ.

ಮನೋಜ್ ನೀಡಿರುವ ದೂರು ಆಧರಿಸಿ ಪೊಲೀಸರು ಎನ್​​ಸಿಆರ್ ದಾಖಲಿಸಿದ್ದಾರೆ. ಆದರೆ ಧ್ರುವ ಸರ್ಜಾ, ಅವರ ಮ್ಯಾನೇಜರ್ ಮತ್ತು ಚಾಲಕರ ಮೇಲೆ ಎಫ್​​ಐಆರ್ ದಾಖಲು ಮಾಡಬೇಕು ಎಂದು ದೂರುದಾರರು ಪೊಲೀಸರನ್ನು ಒತ್ತಾಯಿಸಿದ್ದಾರೆ. ಆದರೆ ಎಫ್​​ಐಆರ್ ದಾಖಲು ಮಾಡಲಾಗಿಲ್ಲ. ಬದಲಿಗೆ ಎನ್​​ಸಿಆರ್ ಅನ್ನಷ್ಟೆ ದಾಖಲು ಮಾಡಲಾಗಿದೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

12 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

12 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

12 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

13 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

14 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

14 hours ago