ಉಜಿರೆ, : ಸೂರ್ಯನ ಸುತ್ತ ವೃತ್ತಾಕಾರದ ಉಂಗುರದಂಥ ಆಕೃತಿಯೊಂದು ಆವರಿಸಿದ್ದು, ಈ ಅಪರೂಪದ ದೃಶ್ಯ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಬುಧವಾರ ಮಧ್ಯಾಹ್ನ ಆಗಸದಲ್ಲಿ ಕಂಡುಬಂತು. ಜನರನ್ನು ಚಕಿತರನ್ನಾಗಿಸಿತು. ಈ ಅಪರೂಪದ ವಿದ್ಯಮಾನವನ್ನು ನೋಡಿದ ಜನರು ಪುಳಕಿತ ಭಾವ ಅನುಭವಿಸಿದರು.
ಮಧ್ಯಾಹ್ನ 11 ಗಂಟೆ ಸುಮಾರಿಗೆ ಆರಂಭವಾದ ಈ ವಿದ್ಯಮಾನ ಸುಮಾರು 20 ನಿಮಿಷಗಳ ವರೆಗೆ ಗೋಚರಿಸಿದ್ದು, ಜನರು ಕೂತೂಹಲದಿಂದ ವೀಕ್ಷಿಸಿದರು.
ಸೂರ್ಯನನ್ನು ಕೇಂದ್ರೀಕರಿಸಿ ವೃತ್ತಾಕಾರದಲ್ಲಿ ಪ್ರಭಾವಳಿಯೊಂದು ಕಂಡುಬಂದಿದೆ. ಉಂಗುರದಂತೆ ಕಂಗೊಳಿಸುತ್ತಿದ್ದ ಈ ವೃತ್ತಾಕಾರದೊಳಗೆ ಮೋಡ ತುಂಬಿದಂತೆ ಭಾಸವಾಗುತ್ತಿತ್ತು. ಹಲವರು ಈ ವಿದ್ಯಮಾನವನ್ನು ಕ್ಯಾಮೆರಾದಲ್ಲೂ ಸೆರೆ ಹಿಡಿದಿದ್ದಾರೆ.
ಸೂರ್ಯನ ಸುತ್ತಲೂ ಆವರಿಸಿರುವ ಮೋಡದಲ್ಲಿ ಹುದುಗಿರುವ ಮಂಜುಗಡ್ಡೆ ಕಣಗಳ ಮೇಲೆ ಬೆಳಕು ಹರಿದ ಪರಿಣಾಮ ಆಕರ್ಷಕ ವೃತ್ತ ಗೋಚರಿಸಿದೆ. ಕಾಮನಬಿಲ್ಲು ಸೃಷ್ಟಿಯಾದಂತೆ ನಡೆದ ವಿದ್ಯಮಾನ ಇದಾಗಿದ್ದು ಬಣ್ಣಗಳಲ್ಲಿ ಮಾತ್ರ ವ್ಯತ್ಯಾಸ ಕಂಡುಬಂದಿದೆ. ವಾತಾವರಣದಲ್ಲಿ ತೇವಾಂಶ ಹೆಚ್ಚು ಇರುವ ಮತ್ತು ಮಳೆ ಬರುವ ಮುನ್ಸೂಚನೆಯನ್ನು ಇದು ನೀಡುತ್ತದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…