Featured

ಉಜಿರೆ : ಆಗಸದಲ್ಲಿ ಅಪರೂಪದ ದೃಶ್ಯ , ಸೂರ್ಯನ ಸುತ್ತ ವೃತ್ತಾಕಾರದ ಉಂಗುರ ಆಕೃತಿ -Vishwanews24

ಉಜಿರೆ, : ಸೂರ್ಯನ ಸುತ್ತ ವೃತ್ತಾಕಾರದ ಉಂಗುರದಂಥ ಆಕೃತಿಯೊಂದು ಆವರಿಸಿದ್ದು,  ಈ ಅಪರೂಪದ ದೃಶ್ಯ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಬುಧವಾರ ಮಧ್ಯಾಹ್ನ ಆಗಸದಲ್ಲಿ ಕಂಡುಬಂತು. ಜನರನ್ನು ಚಕಿತರನ್ನಾಗಿಸಿತು. ಈ ಅಪರೂಪದ ವಿದ್ಯಮಾನವನ್ನು ನೋಡಿದ ಜನರು ಪುಳಕಿತ ಭಾವ ಅನುಭವಿಸಿದರು.

ಮಧ್ಯಾಹ್ನ 11 ಗಂಟೆ ಸುಮಾರಿಗೆ ಆರಂಭವಾದ ಈ ವಿದ್ಯಮಾನ ಸುಮಾರು 20 ನಿಮಿಷಗಳ ವರೆಗೆ ಗೋಚರಿಸಿದ್ದು, ಜನರು ಕೂತೂಹಲದಿಂದ ವೀಕ್ಷಿಸಿದರು.

ಸೂರ್ಯನನ್ನು ಕೇಂದ್ರೀಕರಿಸಿ ವೃತ್ತಾಕಾರದಲ್ಲಿ ಪ್ರಭಾವಳಿಯೊಂದು ಕಂಡುಬಂದಿದೆ. ಉಂಗುರದಂತೆ ಕಂಗೊಳಿಸುತ್ತಿದ್ದ ಈ ವೃತ್ತಾಕಾರದೊಳಗೆ ಮೋಡ ತುಂಬಿದಂತೆ ಭಾಸವಾಗುತ್ತಿತ್ತು. ಹಲವರು ಈ ವಿದ್ಯಮಾನವನ್ನು ಕ್ಯಾಮೆರಾದಲ್ಲೂ ಸೆರೆ ಹಿಡಿದಿದ್ದಾರೆ.

ಸೂರ್ಯನ ಸುತ್ತಲೂ ಆವರಿಸಿರುವ ಮೋಡದಲ್ಲಿ ಹುದುಗಿರುವ ಮಂಜುಗಡ್ಡೆ ಕಣಗಳ ಮೇಲೆ ಬೆಳಕು ಹರಿದ ಪರಿಣಾಮ ಆಕರ್ಷಕ ವೃತ್ತ ಗೋಚರಿಸಿದೆ. ಕಾಮನಬಿಲ್ಲು ಸೃಷ್ಟಿಯಾದಂತೆ ನಡೆದ ವಿದ್ಯಮಾನ ಇದಾಗಿದ್ದು ಬಣ್ಣಗಳಲ್ಲಿ ಮಾತ್ರ ವ್ಯತ್ಯಾಸ ಕಂಡುಬಂದಿದೆ. ವಾತಾವರಣದಲ್ಲಿ ತೇವಾಂಶ ಹೆಚ್ಚು ಇರುವ ಮತ್ತು ಮಳೆ ಬರುವ ಮುನ್ಸೂಚನೆಯನ್ನು ಇದು ನೀಡುತ್ತದೆ.

     

    Vishwa News 24

    Recent Posts

    ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

    ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

    1 hour ago

    ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

    ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

    1 hour ago

    ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

    ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

    1 hour ago

    ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

    ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

    5 hours ago

    ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

    ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

    5 hours ago

    ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

    ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

    5 hours ago