ನವದೆಹಲಿ: ಯುಪಿಐ ಪೇಮೆಂಟ್ ಜನರ ಅವಿಭಾಜ್ಯ ಅಂಗವಾಗಿದೆ. ಕಿರಿಯರಿಂದ ವೃದ್ಧರವರೆಗೂ ಯುಪಿಐ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕ್ಯಾಶ್ ಲೆಸ್ ವ್ಯವಹಾರದ ಸಂಖ್ಯೆ ಹೆಚ್ಚಾದ ಹಿನ್ನೆಲೆ, ನಾಳೆಯಿಂದ ಯುಪಿಐ ಪೇಮೆಂಟ್‌ನಲ್ಲಿ ಕೆಲ ಪ್ರಮುಖ ಬದಲಾವಣೆಯಾಗಲಿದೆ.
ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳ ಜಾರಿಗೆ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮುಂದಾಗಿದೆ. ಈ ಹೊಸ ಮಾರ್ಗಸೂಚಿಗಳು ಗೂಗಲ್ ಪೇ, ಫೋನ್ ಪೇ ಮತ್ತು ಪೇಟಿಎಂನಂತಹ ಡಿಜಿಟಲ್ ಪಾವತಿ ಆಪ್‌ಗಳಿಗೆ ಅನ್ವಯವಾಗಲಿವೆ. ಈ ಬದಲಾವಣೆಗಳು ಬಳಕೆದಾರರ ದೈನಂದಿನ ವಹಿವಾಟುಗಳ ಮೇಲೆ ಅಂತಹ ಬದಲಾವಣೆಗಳನ್ನೇನೂ ತರುವುದಿಲ್ಲವಾದರೂ, ಬ್ಯಾಲೆನ್ಸ್ ಚೆಕ್ ಮತ್ತು ಆಟೋ ಡೆಬಿಟ್‌ಗಳಂತಹ ಕೆಲವು ಕಾರ್ಯಗಳಿಗೆ ಮಿತಿಗಳನ್ನು ಹೇರಲಿದೆ. ಹೊಸ ನಿಯಮಗಳ ಪ್ರಕಾರ, ಬಳಕೆದಾರರು ಪ್ರತಿ ಯುಪಿಐ ಅಪ್ಲಿಕೇಶನ್‌ನಲ್ಲಿ ದಿನಕ್ಕೆ ಗರಿಷ್ಠ 50 ಬಾರಿ ಮಾತ್ರ ಬ್ಯಾಲೆನ್ಸ್ ಚೆಕ್ ಮಾಡಲು ಅವಕಾಶ ಇರಲಿದೆ. ಅದಲ್ಲದೇ ನಿಮ್ಮ ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ದಿನಕ್ಕೆ 25 ಬಾರಿ ಮಾತ್ರ ಪಡೆಯಲು ಅವಕಾಶವಿರಲಿದೆ.
ಇನ್ನೂ ಬ್ಯಾಲೆನ್ಸ್ ಚೆಕ್ ಮಾಡುವುದರ ಜೊತೆಗೆ ಓಟಿಟಿ ಸೇರಿದಂತೆ ಮೊಬೈಲ್ ರಿಚಾರ್ಜ್‌ಗಳ ಆಟೋ ಪೇಗೆ ಸಮಯ ನಿಗದಿಯಾಗಿದ್ದು, ಆ ಸಮಯ ಸಂಧರ್ಭದಲ್ಲಿ ಮಾತ್ರ ಪಾವತಿಗೆ ಅವಕಾಶ ಇರಲಿದೆ. ಮೂರು ನಿರ್ದಿಷ್ಟ ಸಮಯದ ಸ್ಲಾಟ್‌ಗಳನ್ನು ನಿಗದಿಪಡಿಸಲಾಗಿದೆ. ಪೀಕ್ ಅವರ್‌ಗಳಲ್ಲಿ ಸರ್ವರ್‌ಗಳ ಮೇಲಿನ ಒತ್ತಡ ಕಡಿಮೆ ಮಾಡಲು ಈ ಪಾವತಿಗಳನ್ನು ಬೆಳಗ್ಗೆ 10 ಗಂಟೆಗೂ ಮುನ್ನ, ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯ ನಡುವೆ, ಮತ್ತು ರಾತ್ರಿ 9.30ರ ನಂತರ ಮಾತ್ರ ಆಟೋ ಪೇ ಪ್ರಕ್ರಿಯೆ ನಡೆಯಲಿದೆ. ಇಷ್ಟೇ ಅಲ್ಲ ವಹಿವಾಟು ಬಾಕಿ ಉಳಿದಿರೋದನ್ನ ಪರಿಶೀಲನೆ ಮಿತಿಯನ್ನು ಮೂರು ಬಾರಿಗೆ ಮಾತ್ರ ಪರಿಶೀಲಿಸಲು ಅವಕಾಶ ನೀಡಲಾಗಿದೆ. ಪ್ರತಿ ಪ್ರಯತ್ನದ ನಡುವೆ ಕಡ್ಡಾಯವಾಗಿ 90 ಸೆಕೆಂಡ್ ಅಂತರ ಇರಲೇಬೇಕು. ಈ ನಿಯಮವು ಬಳಕೆದಾರರಿಗೆ ಕೊಂಚ ಅನೂನುಕೂಲ ಉಂಟು ಮಾಡುವ ಸಾಧ್ಯತೆ ಇದೆ.
ಒಟ್ಟಾರೆ ಯುಪಿಐ ನಿಯಮಗಳ ಬದಲಾವಣೆ ಬಳಕೆದಾರರ ದೈನಂದಿನ ವಹಿವಾಟಿನ ಮೇಲೆ ಗಂಭೀರ ಪರಿಣಾಮ ಬೀರಲ್ಲ. ಆದರೆ ಸರ್ವರ್ ಮೇಲಿನ ಒತ್ತಡ ಕಡಿಮೆ ಮಾಡಲು ಈ ಕ್ರಮಕೈಗೊಳ್ಳಲಾಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…