Featured

ಆಗಸ್ಟ್ 1-2ರಂದು ‘ಆಳ್ವಾಸ್‌ ಪ್ರಗತಿ’ ಬೃಹತ್‌ ಉದ್ಯೋಗ ಮೇಳ: ಡಾ|ಎಂ. ಮೋಹನ ಆಳ್ವ – vishwanews24

ಆಗಸ್ಟ್ 1-2ರಂದು “ಆಳ್ವಾಸ್‌ ಪ್ರಗತಿ’ ಬೃಹತ್‌ ಉದ್ಯೋಗ ಮೇಳ: ಡಾ|ಎಂ. ಮೋಹನ ಆಳ್ವ

ಮಂಗಳೂರು: ಪ್ರಮುಖ ಉದ್ಯೋಗ ವಲಯಗಳಲ್ಲಿ ವಿಫುಲ ಉದ್ಯೋಗವಕಾಶ ಕಲ್ಪಿಸುವ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ 15ನೇ ಆವೃತ್ತಿಯ “ಆಳ್ವಾಸ್‌ ಪ್ರಗತಿ’ ಬೃಹತ್‌ ಉದ್ಯೋಗ ಮೇಳ ಆ.1-2ರಂದು ಮೂಡುಬಿದಿರೆ ಆಳ್ವಾಸ್‌ ಕಾಲೇಜು ಆವರಣದಲ್ಲಿ ನಡೆಯಲಿದೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ|ಎಂ. ಮೋಹನ್‌ ಆಳ್ವ, ಆಳ್ವಾಸ್‌ ವಿದ್ಯಾಸಂಸ್ಥೆಯು ಇಲ್ಲಿಯವರೆಗೆ ವಿವಿಧ ಭಾಗಗಳಲ್ಲಿ 21 ಬೃಹತ್‌ ಉದ್ಯೋಗ ಮೇಳವನ್ನು ನಡೆಸಿದೆ. ಪ್ರತೀ ಮೇಳದಲ್ಲಿ ಸರಾಸರಿ 200 ರಷ್ಟು ಪ್ರತಿಷ್ಠಿತ ಕಂಪೆನಿಗಳು ಪಾಲ್ಗೊಂಡಿದ್ದು, ಇಲ್ಲಿಯವರೆಗೆ ಒಟ್ಟು 36,151 ಉದ್ಯೋಗಗಳನ್ನು ಒದಗಿಸಿದೆ. 61,517ಅಭ್ಯರ್ಥಿಗಳು ವಿವಿಧ ಕಂಪೆನಿಗಳಿಗೆ ಆಯ್ಕೆ ಪಟ್ಟಿಗೆ ಸೇರಿದ್ದಾರೆ ಎಂದರು.

ಈ ಬಾರಿಯೂ ಬ್ಯಾಂಕಿಂಗ್‌ ಮತ್ತು ಹಣಕಾಸು, ಐಟಿ, ಐಟಿಎಸ್‌, ಮ್ಯಾನುಫ್ಯಾಕ್ಚರಿಂಗ್‌, ಹೆಲ್ತ್‌ಕೇರ್‌ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್‌, ಹಾಸ್ಪಿಟಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್‌ಜಿಓಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಈ ಮೇಳದಲ್ಲಿ ಪಾಲ್ಗೊಳ್ಳಲಿವೆ. ಈ ಬಾರಿ ಈವರೆಗೆ 80 ಕಂಪನಿಗಳು ನೋಂದಾಯಿಸಿಕೊಂಡಿದ್ದು, ಹೆಚ್ಚುವರಿಯಾಗಿ 130 ಕಂಪೆನಿಗಳು ಪಾಲ್ಗೊಳ್ಳುವ ಭರವಸೆ ನೀಡಿವೆ. ಒಟ್ಟು 300 ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಎಂಬಿಎ, ಎಂ.ಕಾಂ, ಬಿ.ಕಾಂ, ಬಿಬಿಎ, ಬಿಎಸ್ಸಿ, ಬಿಎ, ಬಿಸಿಎ ಮತ್ತಿತರ ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್‌, ಎಂಜಿನಿಯರಿಂಗ್‌, ಕಲಾ, ವಾಣಿಜ್ಯ ಹಾಗೂ ಮ್ಯಾನೇಜ್‌ಮೆಂಟ್‌, ಬೇಸಿಕ್‌ ಸೈನ್ಸ್‌, ನರ್ಸಿಂಗ್‌, ಐಟಿಐ, ಡಿಪ್ಲೊಮಾ, ಪಿಯುಸಿ ಎಸೆಸೆಲ್ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಕಂಪೆನಿಗಳು ಉದ್ಯೋಗ ಕಲ್ಪಿಸಲಿವೆ. ಕರಾವಳಿ ಭಾಗದ ವಿವಿಧ ಕಂಪೆನಿ, ಸಂಸ್ಥೆ, ಹೊರಜಿಲ್ಲೆಯ ವಿವಿಧ ಸಂಸ್ಥೆ, ಕಂಪೆನಿಗಳು ಸಹಿತ ಉದ್ಯೋಗ ಸಂಸ್ಥೆಗಳೂ ಪಾಲ್ಗೊಳ್ಳುತ್ತಿವೆ ಎಂದು ಅವರು ಹೇಳಿದರು.

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ವ್ಯವಸ್ಥಾಪಕ ಟ್ರಸ್ಟಿ ವಿವೇಕ ಆಳ್ವ, ತರಬೇತಿ ಹಾಗೂ ನೇಮಕಾತಿ ವಿಭಾಗ ಮುಖ್ಯಸ್ಥೆ ರಂಜಿತಾ, ಆಳ್ವಾಸ್‌ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಪ್ರಸಾದ ಶೆಟ್ಟಿ ಉಪಸ್ಥಿತರಿದ್ದರು.

ಉಚಿತ ಆನ್‌ಲೈನ್‌ ನೋಂದಣಿ
ಹೊರ ಜಿಲ್ಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಜು.31ರಿಂದ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಐಟಿಐ ಅಭ್ಯರ್ಥಿಗಳಿಗೆ ಬಸ್‌ ಸೌಕರ್ಯ ಕಲ್ಪಿಸಲಾಗುವುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಕಂಪೆನಿಗಳ ವಿವರ ಹಾಗೂ ನವೀಕೃತ ಮಾಹಿತಿಗಳನ್ನು ಅಧಿಕೃತ ವೆಬ್‌ಸೈಟ್‌ http://www.alvaspragati.com ನಲ್ಲಿ ಪ್ರಕಟಿಸಲಾಗಿದೆ.

ಆಳ್ವಾಸ್‌ ಪ್ರಗತಿಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳು ಈ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ಉಚಿತ ಆನ್‌ಲೈನ್‌ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಆಳ್ವಾಸ್‌ ಶಿಕ್ಷಣ ಸಂಸ್ಥೆಯನ್ನು ಸಂಪರ್ಕಿಸಬಹುದು.

ಅಭ್ಯರ್ಥಿಗಳು ಲಗತ್ತಿಸಬೇಕಾದ ಅಗತ್ಯ ದಾಖಲೆಗಳು
5-10 ಪಾಸ್‌ಪೋರ್ಟ್‌ ಭಾವಚಿತ್ರಗಳು
ಸಂಪೂರ್ಣ ಶೈಕ್ಷಣಿಕ ಮಾಹಿತಿಗಳನ್ನೊಳಗೊಂಡ ರೆಸ್ಯೂಮ್‌ (8-10 ಪ್ರತಿಗಳು)
ಅಂಕ ಪಟ್ಟಿಗಳು (ಜೆರಾಕ್ಸ್‌ ಪ್ರತಿ)
ಆನ್‌ಲೈನ್‌ ರಿಜಿಸ್ಟ್ರೇಶನ್‌ ನಂಬರ್‌/ ಐಡಿ ಇರಬೇಕು.
ಅಭ್ಯರ್ಥಿಗಳು ಉದ್ಯೋಗ ಮೇಳದಂದು ಬೆಳಗ್ಗೆ 8 ಗಂಟೆಗೆ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಹಾಜರಿರಬೇಕು

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

12 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

12 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

13 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

13 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

13 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

15 hours ago