Featured

ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಮುಂದೆ ಹಾರಿಸಿ ; ದೇಶದ ಜನತೆಗೆ ಪ್ರಧಾನಿ ಕರೆ – Vishwanews24

ಪ್ರತಿ ಮನೆಯಲ್ಲಿ ತಿರಂಗ ಅಭಿಯಾನವನ್ನು ಬಲಪಡಿಸೋಣ..

ಈ ಅಭಿಯಾನ ರಾಷ್ಟ್ರಧ್ವಜದ ಮೇಲೆ ಭಾರತೀಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ..

ಜುಲೈ 22 ಇತಿಹಾಸದಲ್ಲಿ ವಿಶೇಷ ದಿನ

ಇದೇ ದಿನ ನಮ್ಮ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲಾಗಿತ್ತು..

ನವದೆಹಲಿ: ಆಜಾದ್ ಕಿ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆ ದೇಶದ ಜನತೆ ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಮುಂದೆ ಹಾರಿಸಿ ಅಥವಾ ಪ್ರದರ್ಶಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಟ್ವಿಟ್ಟರ್ ಮೂಲಕ ಕರೆ ನೀಡಿದ್ದಾರೆ.

ಈ ವರ್ಷ ದೇಶದ ಜನತೆ ಆಚರಿಸುವ ಸ್ವಾತಂತ್ರ್ಯೋತ್ಸವ ವಿಶೇಷವಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಜಾದ್ ಕಿ ಅಮೃತ ಮಹೋತ್ಸವ ಎಂದು ವರ್ಷವಿಡೀ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಭಾಗವಾಗಿ ನರೇಂದ್ರ ಮೋದಿ ದೇಶದ ಜನತೆಯಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಪ್ರತಿ ಮನೆಯಲ್ಲಿ ತಿರಂಗ ಅಭಿಯಾನವನ್ನು ಬಲಪಡಿಸೋಣ. ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಯಲ್ಲಿ ಹಾರಿಸಿ ಅಥವಾ ಪ್ರದರ್ಶಿಸಿ, ಈ ಅಭಿಯಾನ ರಾಷ್ಟ್ರಧ್ವಜದ ಮೇಲೆ ಭಾರತೀಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಜುಲೈ 22 ಇತಿಹಾಸದಲ್ಲಿ ವಿಶೇಷ ದಿನ:
ಇಂದು ದೇಶದ ಇತಿಹಾಸದಲ್ಲಿ ವಿಶೇಷ ದಿನ. 1947ರಲ್ಲಿ ಇದೇ ದಿನ ನಮ್ಮ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲಾಗಿತ್ತು. ನಮ್ಮ ತ್ರಿವರ್ಣಧ್ವಜದ ಜೊತೆ ಸಹಯೋಗ ಹೊಂದಿದ ಸಮಿತಿಯ ವಿವರ ಈ ರೀತಿ ಇದೆ. ಪಂಡಿತ್ ಜವಹರಲಾಲ್ ನೆಹರೂ ಅವರು ಅನಾವರಣಗೊಳಿಸಿದ ತ್ರಿವರ್ಣಧ್ವಜ ಹಲವು ಆಸಕ್ತಿಕರ ವಿಷಯಗಳೊಂದಿಗೆ ರಾಜಾಜಿಸುತ್ತಿದೆ. ನಾವು ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡುತ್ತಿದ್ದಾಗ ಮುಕ್ತ ಭಾರತಕ್ಕಾಗಿ ಧ್ವಜದ ಕನಸು ಕಂಡಂತಹ ಮಹಾನುಭಾವರ ಧೈರ್ಯ ಮತ್ತು ಪ್ರಯತ್ನಗಳನ್ನು ಇಂದು ನೆನಪಿಸಿಕೊಳ್ಳುತ್ತೇವೆ. ಅವರ ಕನಸಿನ ಭಾರತವನ್ನು ನಿರ್ಮಿಸಲು ನಾವು ಮುಂದಾಗೋಣ ಎಂದು ಅಭಿಪ್ರಾಯಪಟ್ಟಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago