ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧ – vishwanews24

Featured, ರಾಜ್ಯ ನ್ಯೂಸ್

ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧ

ಬೆಂಗಳೂರು: ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಮುಕ್ತ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ತಿಳಿಸಿದರು.

ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್‌ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದರು.

ಉಡುಪಿ : ಜೂ. 11 ರಂದು ಮಿನಿ ಉದ್ಯೋಗ ಮೇಳ – vishwanews24

Leave a Reply