ಮೈಸೂರು: ಆಗಸ್ಟ್ 19 ಮತ್ತು 21 ರಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಬುಧವಾರ ಅಮಾವಾಸ್ಯೆ ಹಾಗೂ ಶುಕ್ರವಾರ ಸ್ವರ್ಣಗೌರಿ ವೃತದ ಹಿನ್ನೆಲೆ ಬೆಟ್ಟಕ್ಕೆ ಬರುವ ಭಕ್ತರು ಹೆಚ್ಚುವ ಕಾರಣ ನಿರ್ಬಂಧ ವಿಧಿಸಲಾಗಿದೆ. ಹೆಚ್ಚು ಭಕ್ತರು ಆಗಮಿಸುವುದರಿಂದ ಸಾಮಾಜಿಕ ಅಂತರ ಹಾಗೂ ಇತೆರ ಕೊರೊನಾ ನಿಯಮಗಳ ಪಾಲನೆ ಕಷ್ಟ ಹೀಗಾಗಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಕುರಿತು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್.ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ. ಈ ಎರಡು ದಿನ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುವಂತಿಲ್ಲ ಎಂದು ತಿಳಿಸಲಾಗಿದೆ.
ಗ್ರಾಮಸ್ಥರ ವಾಹನ ಹಾಗೂ ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ, ಸಾರ್ವಜನಿಕ ಸಾರಿಗೆ ಹಾಗೂ ಯಾವುದೇ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಸಂಚರಿಸುವಂತಿಲ್ಲ. ದೇವಾಲಯ ಅಥವಾ ದಾನಿಗಳ ವತಿಯಿಂದ ಸಾರ್ವಜನಿಕವಾಗಿ ಪ್ರಸಾದ ತಯಾರಿಸುವುದು ಹಾಗೂ ವಿತರಿಸುವುದನ್ನು ನಿಷೇಧಿಸಲಾಗಿದೆ.
ಮೈಸೂರಿನಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,ಹೀಗಾಗಿ ಜಿಲ್ಲೆಯಲ್ಲಿ ಕಟ್ಟೆಚ್ಚರ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆನೆ ದೇವಸ್ಥಾನದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಇದರ ಭಾಗವಾಗಿ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ..
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…