ಆಗಸ್ಟ್ 26 ರಂದು ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ -Vishwanews24

Featured, ಉಡುಪಿ

ಆಗಸ್ಟ್ 26 ರಂದು ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ -Vishwanews24

ಉಡುಪಿ : ಆಗಸ್ಟ್ 26 ರಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯು ಉಡುಪಿಯ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜರುಗಲಿದೆ.

ಈ ಸಭೆಗೆ ಭಾರತೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ವಿದ್ಯಾ ಬಾಲಕೃಷ್ಣ , ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಕೆಂಪರಾಜ್ ಗೌಡ , ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈ ಯವರು ಆಗಮಿಸಲಿದ್ದು, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲೆಯ ,ರಾಜ್ಯದ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಜಿಲ್ಲೆಯ ಯುವ ಕಾಂಗ್ರೆಸ್ ಪಧಾದಿಕಾರಿಗಳು, ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷರು ಹಾಗು ಪದಾಧಿಕಾರಿಗಳು, ಬ್ಲಾಕ್ ಯುವ ಕಾಂಗ್ರೆಸ್ ಪದಾಧಿಕಾರಿಗಳು, ಎಲ್ಲಾ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಜಿಲ್ಲಾ, ವಿಧಾನಸಭಾ ಹಾಗೂ ಬ್ಲಾಕ್ ಮಟ್ಟದ ಸಂಯೋಜಕರುಗಳು ಕಡ್ಡಾಯವಾಗಿ ಹಾಜರಿರಬೇಕಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ವಿಶ್ವಾಸ್ ವಿ. ಅಮೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.