ಮೈಸೂರು: ಇದೇ ಆಗಸ್ಟ್ 30ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅದ್ಧೂರಿ ಚಾಲನೆ ಸಿಗಲಿದೆ.
ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿಂದು ಮೈಸೂರಿಗೆ ಭೇಟಿ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪೂರ್ವ ತಯಾರಿ ಸಭೆ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಮುಂದೆ ಇನ್ನೊಂದು ಕಾರ್ಯಕ್ರಮ ಮಾಡಲು ಪ್ಲ್ಯಾನ್ ಮಾಡುತ್ತಿದ್ದೇವೆ. ಎಲ್ಲರ ಒಮ್ಮತದ ತೀರ್ಮಾನದಿಂದ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಮೈಸೂರಿನಲ್ಲಿ ಅನ್ನಭಾಗ್ಯ ಮಾಡುವ ಪ್ಲ್ಯಾನ್ ಇತ್ತು. ಅಕ್ಕಿ ವಿಚಾರದಲ್ಲಿ ಒಂದಷ್ಟು ಅಡೆತಡೆ ಇದೆ. ಹೀಗಾಗಿ ಗೃಹಲಕ್ಷ್ಮಿಯನ್ನ ಇಲ್ಲಿಂದ ಆರಂಭಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಆಗುವ ಕಾರಣದಿಂದಾಗಿ ಮೈಸೂರಿಗೆ ಶಿಫ್ಟ್ ಮಾಡಿದ್ದೇವೆ. ಆ.30 ರಂದು ಒಂದು ಬಟನ್ ಒತ್ತಿದ ಕೂಡಲೇ ಎಲ್ಲಾ ಫಲಾನುಭವಿಗಳಿಗೆ ಹಣ ಸಂದಾಯವಾಗುತ್ತದೆ. ಅದರ ಮೆಸೇಜ್‌ಗಳು ಫಲಾನುಭವಿಗಳ ಮೊಬೈಲ್ ನಂಬರ್‌ಗಳಿಗೆ ಬರುತ್ತದೆ. ಎಲ್ಲಾ ಹಣವನ್ನ ಬ್ಯಾಂಕ್‌ಗೆ ಡೆಪಾಸಿಟ್ ಮಾಡಿದ್ದೇವೆ. ಸರ್ವರ್ ಸಮಸ್ಯೆಯಾದ್ರೆ ಒಂದಿಷ್ಟು ಜನರಿಗೆ ಹಣ ಬರುವುದು ತಡವಾಗಬಹುದು ಅಷ್ಟೇ ಅಂತಲೂ ಡಿಕೆಶಿ ಸ್ಪಷ್ಟನೆ ಕೊಟ್ಟಿದ್ದಾರೆ.
ಇದು ಸರ್ಕಾರದ ಕಾರ್ಯಕ್ರಮ. ವಿರೋಧ ಪಕ್ಷದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿ. 2 ಸಾವಿರ ಬಸ್‌ಗಳಲ್ಲಿ ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ, ಹಾಸನ ಭಾಗದಿಂದ ಫಲಾನುಭವಿಗಳನ್ನ ಕರೆಸುತ್ತೇವೆ ಅಂತಾ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…