ಉಡುಪಿ : ಶನಿವಾರ ಹೆಬ್ರಿ ತಾಲೂಕಿನ ಕಬ್ಬಿನಾಲೆ ಮತ್ತು ನಾಡ್ಪಾಲು ನಲ್ಲಿ ನಡೆದ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕರ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಸ್ವೀಕರಿಸಿ, ಸೋಮೇಶ್ವರದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ವಾಸ್ತವ್ಯ ಮಾಡಿದ್ದ ಅಧಿಕಾರಿಗಳ ತಂಡ, ಬೆಳಗಿನ ವಾಯು ವಿಹಾರ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ಬಿದ್ದಿದ್ದ ಕಸ ಸಂಗ್ರಹಿಸಿ, ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಮಾದರಿಯಾಗಿದ್ದಾರೆ.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರೊಂದಿಗೆ ಸೋಮೇಶ್ವರದಿಂದ ಆಗುಂಬೆ ಕಡೆಗೆ ಬೆಳಗಿನ ವಾಯು ವಿಹಾರ ಹೊರಟ ಅಧಿಕಾರಿಗಳಾದ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಉಪ ನಿರ್ದೇಶಕ ಚಂದ್ರಶೇಖರ್ ನಾಯಕ್, ಭೂ ದಾಖಲೆಗಳ ಉಪ ನಿರ್ದೇಶಕ ರವೀಂದ್ರ, ಹೆಬ್ರಿ ತಹಸೀಲ್ದಾರ್ ಪುರಂದರ ಅವರು , ರಸ್ತೆಯ ಎರಡೂ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿಗಳು , ಗಾಜಿನ ಬಾಟಲಿಗಳು , ಪ್ಲಾಸ್ಟಿಕ್ ಕವರ್ ಸೇರಿದಂತೆ ಮತ್ತಿತರ ಕಸವನ್ನು ಕಂಡು ಅದನ್ನು ಸ್ವಚ್ಛಗೊಳಿಸಲು ನಿರ್ಧರಿಸಿ, ಆಗುಂಬೆ ಘಾಟ್ ನ ೧೪ ನೇ ತಿರುವಿನಲ್ಲಿ ಸುಮಾರು ೨೦೦ ಮೀ ವರೆಗಿನ ರಸ್ತೆಯಲ್ಲಿ, ಪ್ರವಾಸಿಗರು ಮತ್ತು ಸಾರ್ವಜನಿಕರು ಎಸೆದಿದ್ದ ೫ ಚೀಲಕ್ಕೂ ಹೆಚ್ಚಿನ ಕಸವನ್ನು ಸಂಗ್ರಹಿಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವುದರ ಮೂಲಕ ಆಗುಂಭೆ ಘಾಟ್ ನಲ್ಲಿ ಪರಿಸರ ಸ್ವಚ್ಛತೆಗೆ ಕಾರಣರಾದರು.
ಪ್ರವಾಸಿಗರು ಮತ್ತು ಸಾರ್ವಜನಿಕರು ಆಗುಂಬೆ ಘಾಟ್ ಪ್ರದೇಶದಲ್ಲಿ ಪ್ಲಾಸ್ಟಿಕ್ ಮತ್ತಿತರ ಕಸ ಬಿಸಾಡುವುದರಿಂದ , ಪಶ್ಚಿಮ ಘಟ್ಟದ ಸೂಕ್ಷö್ಮ ಪ್ರದೇಶವಾದ ಇಲ್ಲಿ ಮಾಲಿನ್ಯ ಉಂಟಾಗುವುದರ ಜೊತೆಗೆ ವಿವಿಧ ಕಾಡುಪ್ರಾಣಿಗಳ ಆರೋಗ್ಯಕ್ಕೂ ಸಹ ತೊಂದರೆಯಾಗಲಿದ್ದು, ರಸ್ತೆ ಬದಿಯಲ್ಲಿ ಕಸ ಬಿಸಾಡದಂತೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ವಿನಂತಿ ಮಾಡಿದ್ದಾರೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…