ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿಗೆ 18 ಕೋ. ರೂ. ಅನುದಾನ ಬಿಡುಗಡೆ – vishwanews24

Featured, ಉಡುಪಿ

ಆಗುಂಬೆ ಘಾಟಿ ರಸ್ತೆ ಅಭಿವೃದ್ಧಿ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ 18 ಕೋ. ರೂ. ಅನುದಾನ ಬಿಡುಗಡೆ

ಕಾರ್ಕಳ: ಕರಾವಳಿ ಮತ್ತು ಮಲೆನಾಡು ಸಹಿತ ಉತ್ತರ ಕರ್ನಾಟಕದ ಸಂಪರ್ಕ ಸೇತುವೆಯಾಗಿರುವ ಆಗುಂಬೆ ಘಾಟಿಯ ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ತಡೆಗೋಡೆ ನಿರ್ಮಾಣ ಸಹಿತ ಆಗುಂಬೆಯಿಂದ ಹೆಬ್ರಿ ಪೇಟೆವರೆಗೆ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ವಿಭಾಗದಿಂದ 18 ಕೋಟಿ
ರೂ. ಅನುದಾನ ಬಿಡುಗಡೆಯಾಗಿದೆ.

ಆಗುಂಬೆ ಘಾಟಿಯ ರಸ್ತೆ ಅಭಿವೃದ್ಧಿ ಹಾಗೂ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆ ಸುಧಾರಣೆ ಕೈಗೊಳ್ಳುವ ಕುರಿತು ಈ ಹಿಂದೆ ಸಂಸದರ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಅದರಂತೆ ಈಗ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

ಮಂಗಳೂರು: ಗೋಹತ್ಯೆ ಸಂಪೂರ್ಣ ನಿಷೇಧ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ – vishwanews24

Leave a Reply