ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಸಂಚಾರದಿ0ದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ಣಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ)(2) & (5) ರನ್ವಯ ರಾಷ್ಟಿçÃಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ ಸೆಪ್ಟಂಬರ್ 30 ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.
ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಸಂಚರಿಸುವ ಭಾರಿ ವಾಹನಗಳು ತೀರ್ಥಹಳ್ಳಿ–ನಗರ–ಕುಂದಾಪುರ ಹಾಗೂ ಉಡುಪಿ ಮಾರ್ಗವಾಗಿ ಮತ್ತು ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬರುವ ಭಾರಿ ವಾಹನಗಳು ಬಾಳೆಹೊನ್ನೂರು–ಮಾಗುಂಡಿ–ಕಳಸ–ಕುದುರೆಮುಖ–ಎಸ್.ಕೆ ಬಾರ್ಡರ್ ಮಾರ್ಗವಾಗಿ ಸಂಚರಿಸಬೇಕು. ನರಸಿಂಹರಾಜಪುರದಿ0ದ ಉಡುಪಿ ಕಡೆಗೆ ಬರುವ ವಾಹನಗಳು ಕೊಪ್ಪ–ಜಯಪುರ–ಬಾಳೆಹೊಳೆ–ಕಳಸ–ಕುದುರೆಮುಖ–ಎಸ್.ಕೆ ಬಾರ್ಡರ್ ಮಾರ್ಗವಾಗಿ ಸಂಚರಿಸುವ0ತೆ ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…