ಶಿವಮೊಗ್ಗ, : ಆಗುಂಬೆ ಘಾಟಿಯಲ್ಲಿ ರಸ್ತೆ ದುರಸ್ತಿ ಕಾಮಗಾರಿಯ ಹಿನ್ನಲೆಯಲ್ಲಿ ವಾಹನ ಸಂಚಾರ ನಿಷೇಧಗೊಳಿಸಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 5ರಿಂದ ಮಾರ್ಚ್ 15ರವರೆಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಲಘು ವಾಹನಗಳು ಮತ್ತು ಭಾರಿ ವಾಹನಗಳಿಗೆ ಪ್ರತ್ಯೇಕ ಮಾರ್ಗವನ್ನು ಸೂಚಿಸಲಾಗಿದೆ.
ಆಗುಂಬೆ ಘಾಟಿಯ ತಪಾಸಣಾ ಕೇಂದ್ರದಿಂದ ಹೆಬ್ರಿವರೆಗೆ 5.25 ಕೋಟಿ ರೂ. ವೆಚ್ಚದಲ್ಲಿ 20 ಕಿ.ಮೀ ಡಾಂಬರೀಕರಣ ಕಾಮಗಾರಿ ಆರಂಭಿಸಲಾಗುತ್ತಿದೆ. ಸಂಜೆ 7ರಿಂದ ಬೆಳಿಗ್ಗೆ 7ರವರೆಗೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ, ಆಗುಂಬೆ, ಉಡುಪಿ. ಮಂಗಳೂರು ಹೆದ್ದಾರಿಯಲ್ಲಿ ಸಂಚರಿಸುವ ಲಘು ವಾಹನಗಳು ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ, ಮಾಳಾ ಘಾಟಿ, ಕಾರ್ಕಳ ಮೂಲಕ ಉಡುಪಿ ತಲುಪಬಹುದು, ಭಾರಿ ವಾಹನಗಳು ಆಯನೂರು, ಆನಂದಪುರ, ಸಾಗರ, ಹೊನ್ನಾವರ ಮೂಲಕ ಸಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…