ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಕೂಗಲಾಗುವ ಆಝಾನ್‌ನಲ್ಲಿ ಇರುವ ವಿಚಾರಗಳನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಲು ಹೈಕೋರ್ಟ್ ನಿರಾಕರಿಸಿದೆ.
ನಗರದ ನಿವಾಸಿ ಆರ್.ಚಂದ್ರಶೇಖರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಪ್ರತಿ ದಿನ 5 ಬಾರಿ ಆಝಾನ್ ಕೂಗುವುದರಿಂದ ಬೇರೆ ಧರ್ಮಗಳ ಅನುಯಾಯಿಗಳ ಭಾವನೆಗೆ ಧಕ್ಕೆಯಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.
ಅರ್ಜಿದಾರರೇ ಆಝಾನ್ ಅಗತ್ಯ ಧಾರ್ಮಿಕ ಆಚರಣೆ ಎಂದು ತಿಳಿಸಿದ್ದಾರೆ. ಅಲ್ಲದೆ, ಆಝಾನ್‌ನಲ್ಲಿ ಇರುವ ವಿಚಾರಗಳು, ಬೇರೆ ಧರ್ಮಗಳ ಅನುಯಾಯಿಗಳ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎನ್ನುವ ಅರ್ಜಿದಾರರ ವಾದವನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.
ಭಾರತದ ಸಂವಿಧಾನದ ಪ್ರಕಾರ 25 ಮತ್ತು 26ನೆ ವಿಧಿಗಳು ನಮ್ಮ ದೇಶದ ಸಂಸ್ಕೃತಿಯ ಸಹನಶೀಲತೆಯ ಮೂರ್ತರೂಪವಾಗಿವೆ. 25(1) ವಿಧಿಯು ಪ್ರತಿ ವ್ಯಕ್ತಿಯೂ ತಮ್ಮ ತಮ್ಮ ಧರ್ಮಗಳಲ್ಲಿ ಶ್ರದ್ಧೆ ಇರಿಸಲು, ಆಚರಿಸಲು ಮತ್ತು ಪ್ರಚಾರ ಮಾಡಲು ಅವಕಾಶ ಮಾಡಿಕೊಡುತ್ತದೆ ಎಂದು ಪೀಠವು ಹೇಳಿದೆ.
ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಬಹುಮಾನ – Vishwanews24
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…