Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಬೆಂಗಳೂರು: ಮಕ್ಕಳಲ್ಲಿ ಸಾತ್ವಿಕ ಸಂಸ್ಕಾರವನ್ನು ಬೆಳೆಸೋಣ. ಅದರ ಹೊರತಾಗಿ ಇನ್ನೊಂದು ಧರ್ಮದ ನಂಬಿಕೆಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯದಲ್ಲಿ ಎದ್ದಿರುವ ಆಝಾನ್ ಗದ್ದಲದ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, ನಸುಕಿನಲ್ಲಿ ಸುಪ್ರಭಾತ ಮತ್ತು ಅಲ್ಲಾಹ್ ಕೂಗುವ ಪರಿಪಾಠ ನಿನ್ನೆ-ಇಂದಿನದಲ್ಲ. ಅನಾದಿ ಕಾಲದಿಂದಲೂ, ಧರ್ಮಗಳು ಹುಟ್ಟಿದಾಗಿನಿಂದಲೂ ನಡೆದುಕೊಂಡೇ ಬಂದಿವೆ ಎಂದಿದ್ದಾರೆ.
ನಮ್ಮ ಮನೆಗಳಲ್ಲೂ ಬೆಳಗ್ಗೆಯೇ ಪೂಜೆ ನೆರೆವೇರಿಸಿ ಮಂಗಳಕರವಾದ ಘಂಟೆ ಭಾರಿಸುವುದನ್ನು ನಿತ್ಯವೂ ಕೇಳುತ್ತೇವೆ. ದೈವಕ್ಕೆ ಪ್ರಿಯವಾದ ಆ ಘಂಟೆಯ ಸದ್ದು ಯಾರಿಗೂ ಕಿರಿಕಿರಿ ಉಂಟು ಮಾಡಿಲ್ಲ. ಅಲ್ಲದೆ, ದೇವಾಲಯಗಳಲ್ಲಿ ಮಹಾ ಮಂಗಳಾರತಿ ಸಂದರ್ಭಗಳಲ್ಲಿ ಢಮರುಗ, ಜಾಗಟೆ, ಘಂಟೆ ಇತ್ಯಾದಿಗಳನ್ನು ಬಾರಿಸುವ ಸಂಪ್ರದಾಯ ಇದ್ದೇ ಇದೆ. ಶಿವನಿಗೆ ಪ್ರಿಯವಾದ ಢಮರುಗ ಯಾರಿಗಾದರೂ ಕಿರಿಕಿರಿ ಮಾಡಿದೆಯೇ? ಎಂದವರು ಪ್ರಶ್ನಿಸಿದ್ದಾರೆ.
ಹಿಂದುಗಳಾದ ನಾವು ನಮ್ಮ ದೇವರಿಗೆ ಭಕ್ತಿಯಿಂದ ಸಲ್ಲಿಸುವ ಸೇವೆಗಳಿಗೆ ಮುಸ್ಲಿಮರು ಸೇರಿ ಅನ್ಯ ಧರ್ಮದ ಯಾರಿಂದಲೂ ಆಕ್ಷೇಪ ಇಲ್ಲದಿರುವಾಗ ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ತೆಗೆಯುವುದು ಏಕೆ? ಅಗತ್ಯ ಬಿದ್ದರೆ, ಶಬ್ದದ ಪ್ರಮಾಣವನ್ನು ವೈಜ್ಞಾನಿಕವಾಗಿ ಚಿಂತಿಸಿ ಕಡಿಮೆ ಮಾಡಲಿ. ಆ ಬಗ್ಗೆ ಮುಸ್ಲಿಂ ಧರ್ಮಗುರುಗಳೂ ಆಲೋಚನೆ ಮಾಡಲಿ ಎಂದವರು ಇದೇ ವೇಳೆ ಸಲಹೆ ನೀಡಿದ್ದಾರೆ.
ಭಾರತೀಯ ಸಂವಿಧಾನವು ಜಗತ್ತಿನ ಸರ್ವಶ್ರೇಷ್ಠ ಸಂವಿಧಾನ. ಅದರಲ್ಲಿ ಅಡಕವಾಗಿರುವ ಸಹಿಷ್ಣುತೆಯ ಆಶಯಕ್ಕೆ ಧಕ್ಕೆ ತರುವುದು ಬೇಡ. ಸಂಸತ್ತಿನಲ್ಲಿರುವ ಸಂವಿಧಾನ ಪ್ರತಿಗೆ ಶಿರಬಾಗಿ ನಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಹಿಂದೂ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ನಾಯಕರು ಮೋದಿ ಅವರ ಮೇಲ್ಪಂಕ್ತಿಯನ್ನು ಗೌರವಿಸಬೇಕು ಎಂದು ಎಚ್ ಡಿಕೆ ತಿಳಿಸಿದ್ದಾರೆ.
ದೇವಾಲಯಗಳಲ್ಲಿ ನಡೆಯುತ್ತಿದ್ದ ನಿತ್ಯ ಭಜನೆ, ಸುಪ್ರಭಾತ ವೇಳೆ ಕೇಳಿ ಬರುತ್ತಿದ್ದ ಶ್ಲೋಕ, ಕೀರ್ತನೆ, ಭಜನೆಗಳು ಕ್ರಮೇಣ ಕಣ್ಮರೆಯಾಗಿವೆ. ನಾವೆಲ್ಲರೂ ಸೇರಿ ಅವುಗಳ ಪುನರುದ್ಧಾರ ಮಾಡೋಣ ಎಂದು ಟ್ವೀಟಿಸಿದ್ದಾರೆ.
ದೇವಾಲಯಗಳಲ್ಲಿ ಸೂರ್ಯೋದಯಕ್ಕೆ ಮುನ್ನವೇ ಸುಪ್ರಭಾತ ಕೇಳಿಸುವುದು, ಮಸೀದಿಗಳಲ್ಲಿ ಅಲ್ಲಾಹ್ ಕೂಗುವುದನ್ನು ನಾನು ಬಾಲ್ಯದಿಂದಲೂ ಕೇಳಿಕೊಂಡೇ ಬೆಳೆದಿದ್ದೇನೆ. ನಮ್ಮ ಊರಿನಲ್ಲಿ ನಿತ್ಯವೂ ನಾನು ಕೇಳುತ್ತಿದ್ದ ಸದ್ದುಗಳಾಗಿದ್ದವು ಎಂದು ಇದೇ ವೇಳೆ ಸ್ಮರಿಸಿಕೊಂಡರು.
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…
ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…
ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ…
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…