ಬೆಂಗಳೂರು: ಶಬ್ಧ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಹಂತ ಹಂತವಾಗಿ ಹೈಕೋರ್ಟ್ ಆದೇಶ ಪಾಲನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ‘ಆಝಾನ್ ಬಗ್ಗೆ ಹೈಕೋರ್ಟ್ ಆದೇಶ ಇದೆ. ಈ ಆದೇಶ ಪಾಲಿಸಿಲ್ಲ ಅಂತ ಹೈಕೋರ್ಟ್ ಮತ್ತೊಂದು ಆದೇಶ ಮಾಡಿದೆ. ಎಷ್ಟು ಡೆಸಿಬಲ್ ಶಬ್ಧ ಇರಬೇಕು ಅಂತ ಕೂಡಾ ಆದೇಶ ಇದೆ. ಡೆಸಿಬಲ್ ಯಂತ್ರಗಳನ್ನು ಜಿಲ್ಲಾ ಮಟ್ಟದಲ್ಲಿ ಖರೀದಿ ಮಾಡಿ ಅಂತ ಆದೇಶದಲ್ಲಿ ಹೇಳಲಾಗಿದೆ. ಹೈಕೋರ್ಟ್ ನೀಡಿರುವ ಹಿಂದಿನ ಆದೇಶಗಳನ್ನು ಹಂತ ಹಂತವಾಗಿ ಪಾಲನೆಗೆ ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲರನ್ನೂ ವಿಶ್ವಾಸದಲ್ಲಿ ತೆಗೆದುಕೊಂಡು ಮಾಡುವ ಕೆಲಸ ಇದು. ಯಾವುದೇ ರೀತಿಯ ಬಲವಂತ ಮಾಡಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಆಝಾನ್ ವಿವಾದದ ಬಗ್ಗೆ ಕೆಲವು ಸಂಘಟನೆಗಳು ಪ್ರಚೋದನೆ ನೀಡುತ್ತಿರುವ ವಿಚಾರವಾಗಿ ಮಾತನಾಡಿ ‘ಹಲವು ಸಂಘಟನೆಗಳ ಜತೆ ಪೊಲೀಸ್ ಠಾಣೆ ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನೂ ಮಾಡಿದ್ದೇವೆ. ಮುಂದೆಯೂ ಈ ರೀತಿಯ ಸಭೆಗಳನ್ನು ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಅಲ್ಲದೇ, ‘ಹಲವು ವಿಚಾರಗಳು ಇವಾಗ ಚರ್ಚೆಗೆ ಬಂದಿವೆ, ಅವೆಲ್ಲ ಹಿಂದೆ ಇದ್ದ ವಿಚಾರಗಳೇ ಆಗಿವೆ. ಸರ್ಕಾರ ಯಾವುದೇ ಹೊಸ ಆದೇಶ ಮಾಡಿಲ್ಲ. ಎಲ್ಲವನ್ನೂ ಗಮನದಲ್ಲಿ ಇಟ್ಕೊಂಡಿದ್ದೇವೆ.ಯಾವುದೇ ಸಮಾಜ, ಸಂಘಟನೆ ಶಾಂತಿ ಸುವ್ಯವಸ್ಥೆ ಕದಡದಿರಲಿ. ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ಕ್ರಮ ತಗೋತೇವೆ. ಸರ್ಕಾರದ ದೃಷ್ಟಿಯಲ್ಲಿ ಎಲ್ಲರೂ ಸಮಾನರೇ. ಯಾವುದೇ ಭೇದ ಭಾವ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…