Featured

ಆಝಾನ್‌ ವಿವಾದ : ಸರ್ಕಾರ ಯಾವುದೇ ಹೊಸ ಆದೇಶ ಮಾಡಿಲ್ಲ , ಹೈಕೋರ್ಟ್ ಆದೇಶ ಪಾಲನೆ ಮಾಡಲಾಗುವುದು : ಸಿಎಂ

ಆಝಾನ್‌ ವಿವಾದ : ಸರ್ಕಾರ ಯಾವುದೇ ಹೊಸ ಆದೇಶ ಮಾಡಿಲ್ಲ , ಹೈಕೋರ್ಟ್ ಆದೇಶ ಪಾಲನೆ ಮಾಡಲಾಗುವುದು : ಸಿಎಂ

ಬೆಂಗಳೂರು: ಶಬ್ಧ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಹಂತ ಹಂತವಾಗಿ ಹೈಕೋರ್ಟ್ ಆದೇಶ ಪಾಲನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ‘ಆಝಾನ್ ಬಗ್ಗೆ ಹೈಕೋರ್ಟ್ ಆದೇಶ ಇದೆ. ಈ ಆದೇಶ ಪಾಲಿಸಿಲ್ಲ ಅಂತ ಹೈಕೋರ್ಟ್ ಮತ್ತೊಂದು ಆದೇಶ ಮಾಡಿದೆ. ಎಷ್ಟು ಡೆಸಿಬಲ್ ಶಬ್ಧ ಇರಬೇಕು ಅಂತ ಕೂಡಾ ಆದೇಶ ಇದೆ. ಡೆಸಿಬಲ್ ಯಂತ್ರಗಳನ್ನು ಜಿಲ್ಲಾ ಮಟ್ಟದಲ್ಲಿ ಖರೀದಿ ಮಾಡಿ ಅಂತ ಆದೇಶದಲ್ಲಿ ಹೇಳಲಾಗಿದೆ. ಹೈಕೋರ್ಟ್ ನೀಡಿರುವ ಹಿಂದಿನ ಆದೇಶಗಳನ್ನು ಹಂತ ಹಂತವಾಗಿ ಪಾಲನೆಗೆ ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲರನ್ನೂ ವಿಶ್ವಾಸದಲ್ಲಿ ತೆಗೆದುಕೊಂಡು ಮಾಡುವ ಕೆಲಸ ಇದು. ಯಾವುದೇ ರೀತಿಯ ಬಲವಂತ ಮಾಡಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಆಝಾನ್‌ ವಿವಾದದ ಬಗ್ಗೆ ಕೆಲವು ಸಂಘಟನೆಗಳು ಪ್ರಚೋದನೆ ನೀಡುತ್ತಿರುವ ವಿಚಾರವಾಗಿ ಮಾತನಾಡಿ ‘ಹಲವು ಸಂಘಟನೆಗಳ ಜತೆ ಪೊಲೀಸ್ ಠಾಣೆ ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನೂ ಮಾಡಿದ್ದೇವೆ. ಮುಂದೆಯೂ ಈ‌ ರೀತಿಯ ಸಭೆಗಳನ್ನು ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಅಲ್ಲದೇ, ‘ಹಲವು ವಿಚಾರಗಳು ಇವಾಗ ಚರ್ಚೆಗೆ ಬಂದಿವೆ, ಅವೆಲ್ಲ ಹಿಂದೆ ಇದ್ದ ವಿಚಾರಗಳೇ ಆಗಿವೆ. ಸರ್ಕಾರ ಯಾವುದೇ ಹೊಸ ಆದೇಶ ಮಾಡಿಲ್ಲ. ಎಲ್ಲವನ್ನೂ ಗಮನದಲ್ಲಿ ಇಟ್ಕೊಂಡಿದ್ದೇವೆ.ಯಾವುದೇ ಸಮಾಜ, ಸಂಘಟನೆ ಶಾಂತಿ ಸುವ್ಯವಸ್ಥೆ ಕದಡದಿರಲಿ. ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ಕ್ರಮ ತಗೋತೇವೆ. ಸರ್ಕಾರದ ದೃಷ್ಟಿಯಲ್ಲಿ ಎಲ್ಲರೂ ಸಮಾನರೇ.‌ ಯಾವುದೇ ಭೇದ ಭಾವ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

14 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

14 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

14 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

15 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago