ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ 13 ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡು ತಗುಲಿದ ಪರಿಣಾಮ ಮಗುವಿನ ಹೊಟ್ಟೆ ಛಿದ್ರವಾಗಿದ್ದು ಪ್ರಾಣಬಿಟ್ಟಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ.
ಕೋಳಿ ಫಾರಂನಲ್ಲಿ ಭದ್ರತೆಗಾಗಿ ಒಂದು ಅಸಲಿ ಗನ್ ಇಡಲಾಗಿತ್ತು. ಅದು ಸಜೀವ ಗುಂಡುಗಳಿಂದ ಲೋಡೆಡ್ ಆಗಿತ್ತು. ಪಶ್ಚಿಮ ಬಂಗಾಳ ಮೂಲದ ಶಶಾಂಕ್ ಹಾಗೂ ಲಿಪಿಕ ದಂಪತಿ ಇಲ್ಲೇ ಕೂಲಿ ಕಾರ್ಮಿಕರಾಗಿದ್ದು, 13 ವರ್ಷದ ಬಾಲಕ ಸುದೀಪ್ ದಾಸ್‌ನೊಂದಿಗೆ 3 ವರ್ಷದ ಮಗುವನ್ನು ಆಟವಾಡಲು ಬಿಟ್ಟು ಕೆಲಸಕ್ಕೆ ಹೋಗಿದ್ದರು.
ಈ ವೇಳೆ ಬಾಲಕ ಸುದೀಪ್, ಮೇಲೆ ಇದ್ದ ಗನ್ ತೆಗೆದುಕೊಂಡು ಕಳ್ಳ-ಪೊಲೀಸ್ ಆಟ ಆಡೋಣ ಎನ್ನುತ್ತಾ 3 ವರ್ಷದ ಮಗುವಿನ ಮೇಲೆ ಶೂಟ್ ಮಾಡಿದ್ದಾನೆ. ಈ ಆಕಸ್ಮಿಕ ಫೈರಿಂಗ್ ಮಗುವಿನ ಹೊಟ್ಟೆ ಸೀಳಿದೆ. ಅಲ್ಲೇ ಅಭಿಷೇಕ್ ತಾಯಿ ಲಿಪಿಕಾ ಇದ್ದು ಅವರಿಗೂ ಗಾಯವಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ನಾಗಮಂಗಲ ಆಸ್ಪತ್ರೆಗೆ ದಾಖಲಿಸಲಾಯಿತು. ಗನ್‌ನಿಂದ ಫೈರ್ ಆದ ಗುಂಡು ಮಗುವಿನ ಹೊಟ್ಟೆ ಸೀಳಿದ್ದರಿಂದ ಹೊಟ್ಟೆಯಲ್ಲಿದ್ದ ಕರಳು ಹೊರಗೆ ಬಂದಿತ್ತು. ಆದರೂ, ಉಸಿರಾಡುತ್ತಿದ್ದ ಮಗುವಿನ ಕರಳುಗಳನ್ನು ಹೊಟ್ಟೆಯ ಮೇಲೆ ಟವೆಲ್‌ನಿಂದ ಕಟ್ಟಿಕೊಂಡು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ತೀವ್ರ ರಕ್ತಸ್ರಾವ ಉಂಟಾಗಿದ್ದರಿಂದ ಮಗು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ.
ಸ್ಥಳಕ್ಕೆ ಮಂಡ್ಯ ಜಿಲ್ಲಾ ಎಸ್‌ಪಿ ಭೇಟಿ: ಗನ್ ವಶಕ್ಕೆ ಪಡೆದು ತನಿಖೆ
ಆಕಸ್ಮಿಕ ಫೈರಿಂಗ್ನಿಂದ ಮಗು ಸಾವನಪ್ಪಿದ ಘಟನಾ ಸ್ಥಳಕ್ಕೆ ಮಂಡ್ಯ ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಗನ್ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…