Featured

ಆಟದ ಗನ್ ಎಂದು ಅಸಲಿ ಗನ್‌ನಿಂದ ಫೈರಿಂಗ್, 3 ವರ್ಷದ ಬಾಲಕ ಮೃತ್ಯು – vishwanews24

ಆಟದ ಗನ್ ಎಂದು ಅಸಲಿ ಗನ್‌ನಿಂದ ಫೈರಿಂಗ್, 3 ವರ್ಷದ ಬಾಲಕ ಮೃತ್ಯು

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ 13 ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡು ತಗುಲಿದ ಪರಿಣಾಮ ಮಗುವಿನ ಹೊಟ್ಟೆ ಛಿದ್ರವಾಗಿದ್ದು ಪ್ರಾಣಬಿಟ್ಟಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ.

ಕೋಳಿ ಫಾರಂನಲ್ಲಿ ಭದ್ರತೆಗಾಗಿ ಒಂದು ಅಸಲಿ ಗನ್‌ ಇಡಲಾಗಿತ್ತು. ಅದು ಸಜೀವ ಗುಂಡುಗಳಿಂದ ಲೋಡೆಡ್ ಆಗಿತ್ತು. ಪಶ್ಚಿಮ ಬಂಗಾಳ ಮೂಲದ ಶಶಾಂಕ್ ಹಾಗೂ ಲಿಪಿಕ ದಂಪತಿ ಇಲ್ಲೇ ಕೂಲಿ ಕಾರ್ಮಿಕರಾಗಿದ್ದು, 13 ವರ್ಷದ ಬಾಲಕ ಸುದೀಪ್‌ ದಾಸ್‌ನೊಂದಿಗೆ 3 ವರ್ಷದ ಮಗುವನ್ನು ಆಟವಾಡಲು ಬಿಟ್ಟು ಕೆಲಸಕ್ಕೆ ಹೋಗಿದ್ದರು.

ಈ ವೇಳೆ ಬಾಲಕ ಸುದೀಪ್, ಮೇಲೆ ಇದ್ದ ಗನ್ ತೆಗೆದುಕೊಂಡು ಕಳ್ಳ-ಪೊಲೀಸ್ ಆಟ ಆಡೋಣ ಎನ್ನುತ್ತಾ 3 ವರ್ಷದ ಮಗುವಿನ ಮೇಲೆ ಶೂಟ್ ಮಾಡಿದ್ದಾನೆ. ಈ ಆಕಸ್ಮಿಕ ಫೈರಿಂಗ್‌ ಮಗುವಿನ ಹೊಟ್ಟೆ ಸೀಳಿದೆ. ಅಲ್ಲೇ ಅಭಿಷೇಕ್ ತಾಯಿ ಲಿಪಿಕಾ ಇದ್ದು ಅವರಿಗೂ ಗಾಯವಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ನಾಗಮಂಗಲ ಆಸ್ಪತ್ರೆಗೆ ದಾಖಲಿಸಲಾಯಿತು. ಗನ್‌ನಿಂದ ಫೈರ್ ಆದ ಗುಂಡು ಮಗುವಿನ ಹೊಟ್ಟೆ ಸೀಳಿದ್ದರಿಂದ ಹೊಟ್ಟೆಯಲ್ಲಿದ್ದ ಕರಳು ಹೊರಗೆ ಬಂದಿತ್ತು. ಆದರೂ, ಉಸಿರಾಡುತ್ತಿದ್ದ ಮಗುವಿನ ಕರಳುಗಳನ್ನು ಹೊಟ್ಟೆಯ ಮೇಲೆ ಟವೆಲ್‌ನಿಂದ ಕಟ್ಟಿಕೊಂಡು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ತೀವ್ರ ರಕ್ತಸ್ರಾವ ಉಂಟಾಗಿದ್ದರಿಂದ ಮಗು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ.

ಸ್ಥಳಕ್ಕೆ ಮಂಡ್ಯ ಜಿಲ್ಲಾ ಎಸ್‌ಪಿ ಭೇಟಿ: ಗನ್ ವಶಕ್ಕೆ ಪಡೆದು ತನಿಖೆ
ಆಕಸ್ಮಿಕ ಫೈರಿಂಗ್​ನಿಂದ ಮಗು ಸಾವನಪ್ಪಿದ ಘಟನಾ ಸ್ಥಳಕ್ಕೆ ಮಂಡ್ಯ ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಗನ್ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

6 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

18 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

33 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago