Featured

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು – vishwanews24

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನೆರೆಮನೆಯ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಬಿದ್ದ ಪರಿಣಾಮ 5 ವರ್ಷದ ಪುಟಾಣಿ ಮಗು ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ.

ಮೃತಪಟ್ಟ ದುರ್ದೈವಿ ಮಗುವನ್ನು ಯಾದಗಿರಿ ಮೂಲದ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕ್ಯಾಬ್ ಚಾಲಕರಾಗಿರುವ ದಾವಲ್ ಸಾಬ್ ಅವರು ಬೆಂಗಳೂರಿನಲ್ಲಿ ಹೊಸ ಕೆಲಸದ ಹುಡುಕಾಟದಲ್ಲಿದ್ದರು. ಅವರ ಪತ್ನಿ ಹಾಗೂ ಮಗು ಅಫೀನ್ ಕೇವಲ ಐದು ದಿನಗಳ ಹಿಂದಷ್ಟೇ ಬಾಗಲೂರು ವ್ಯಾಪ್ತಿಯ ಬಂಡಿಕೊಡಿಗೇಹಳ್ಳಿಯಲ್ಲಿರುವ ತಮ್ಮ ತಂಗಿಯ ಮನೆಗೆ ಬಂದಿದ್ದರು.

ಬುಧವಾರ ಸಂಜೆ ವೇಳೆಗೆ, ಅಫೀನ್ ಪಕ್ಕದ ಮನೆಯ ಮಕ್ಕಳಾದ ಸಮನ್ವಿ ಹಾಗೂ ಮತ್ತೊಂದು ಮಗುವಿನೊಂದಿಗೆ ಬಿ.ಸಿ. ನರಸಪ್ಪ ಎಂಬುವರ ಮನೆಯ ಕಾಂಪೌಂಡ್ ಗೇಟ್ ಬಳಿ ಆಟವಾಡುತ್ತಿದ್ದನು. ಮಕ್ಕಳು ಆಟದ ಭರದಲ್ಲಿ ಕಬ್ಬಿಣದ ಗೇಟ್ ಹಿಡಿದು ಜೀಕಾಡುತ್ತಿದ್ದಾಗ, ಗೇಟ್‌ನ ಭಾರ ತಾಳಲಾರದೆ ಕಾಂಪೌಂಡ್ ಗೋಡೆಯು ಗೇಟ್ ಸಮೇತ ಒಮ್ಮೆಲೇ ಮಕ್ಕಳ ಮೇಲೆ ಕುಸಿದು ಬಿದ್ದಿದೆ.

ಈ ಘಟನೆಯನ್ನು ನೋಡಿ ಸ್ಥಳೀಯರು ತಕ್ಷಣವೇ ಓಡಿ ಬಂದು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮಕ್ಕಳಿಬ್ಬರನ್ನು ಹೊರತೆಗೆದು ಖಾಸಗಿ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದರು. ಆದರೆ, ತಲೆ ಹಾಗೂ ಎದೆಯ ಭಾಗಕ್ಕೆ ತೀವ್ರವಾಗಿ ಪೆಟ್ಟಾಗಿದ್ದ ಅಫೀನ್ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಮತ್ತೊಂದು ಮಗು ಸಮನ್ವಿಗೆ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಬಾಗಲೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಂಪೌಂಡ್ ಗೋಡೆಯ ಅವೈಜ್ಞಾನಿಕ ನಿರ್ಮಾಣದ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

11 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

12 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

12 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

15 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

15 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

15 hours ago