Featured

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ

ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ ಚಾಲಕರಿಗೆ ಕೊನೆಗೂ ದೊಡ್ಡ ನಿರಾಳ ಸಿಕ್ಕಿದೆ. ಪ್ರಮುಖ ಇಂಧನ ವಿತರಕ ಸಂಸ್ಥೆಯಾದ ಟೋಟಲ್ ಗ್ಯಾಸ್ ತನ್ನ ಬಂಕ್‌ಗಳಲ್ಲಿ ಆಟೋ ಎಲ್‌ಪಿಜಿ ದರವನ್ನು ಪ್ರತಿ ಲೀಟರ್‌ಗೆ ಭರ್ಜರಿ 10 ರೂಪಾಯಿಗಳಷ್ಟು ಕಡಿತಗೊಳಿಸಿದೆ.

ಕಳೆದ ಕೆಲವು ತಿಂಗಳುಗಳ ಹಿಂದೆ ನಡೆದ ಅಮೆರಿಕ, ಇಸ್ರೇಲ್‌ ಮತ್ತು ಇರಾನ್‌ ನಡುವಿನ ಭೀಕರ ಸಂಘರ್ಷದಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಪೂರೈಕೆ ಏರುಪೇರಾಗಿತ್ತು. ಇದರ ನೇರ ಪರಿಣಾಮವಾಗಿ ಆಟೋ ಎಲ್‌ಪಿಜಿ ದರವು ಸಾರ್ವಕಾಲಿಕ ದಾಖಲೆಯ ಬರೋಬ್ಬರಿ 100 ರೂಪಾಯಿಗಳ ಗಡಿಯನ್ನು ದಾಟಿತ್ತು. ಇದು ದೈನಂದಿನ ಜೀವನಕ್ಕಾಗಿ ಆಟೋ ಬಾಡಿಗೆಯನ್ನೇ ನಂಬಿಕೊಂಡಿದ್ದ ಲಕ್ಷಾಂತರ ಚಾಲಕರ ಜೇಬಿಗೆ ಕತ್ತರಿ ಹಾಕಿತ್ತು.

ಇದನ್ನೂ ಓದಿ: 

ಈಗ ಜಾಗತಿಕ ಪರಿಸ್ಥಿತಿ ತಿಳಿಯಾಗುತ್ತಿದ್ದಂತೆ ಇತ್ತೀಚೆಗಷ್ಟೇ ಹಂತ-ಹಂತವಾಗಿ 95 ರೂಪಾಯಿಗಳಿಗೆ ಇಳಿಕೆಯಾಗಿದ್ದ ದರ ಇದೀಗ ಮತ್ತೊಂದು ದೊಡ್ಡ ಕುಸಿತ ಕಂಡಿದೆ. ಪ್ರಸ್ತುತ 95 ರೂಪಾಯಿಗಳಿಂದ ನೇರವಾಗಿ 85 ರೂಪಾಯಿಗಳಿಗೆ ಇಳಿಕೆ (ಸಾಗಣೆ ವೆಚ್ಚಗಳಿಂದ ಈ ದರ ನಗರದಿಂದ ನಗರಕ್ಕೆ ಬದಲಾಗುತ್ತದೆ) ಮಾಡಲಾಗಿದೆ.

ಅಂತರರಾಷ್ಟ್ರೀಯ ಮಟ್ಟದಲ್ಲಿ ಎಲ್‌ಪಿಜಿ ಸರಬರಾಜು ಮತ್ತು ಪೂರೈಕೆ  ವ್ಯವಸ್ಥೆ ಸುಧಾರಿಸಿರುವುದು ಹಾಗೂ ಮಾರುಕಟ್ಟೆಯಲ್ಲಿ ಇಂಧನದ ಲಭ್ಯತೆ ಹೆಚ್ಚಾಗಿರುವುದೇ ಈ ಬೆಲೆ ಇಳಿಕೆಗೆ ಮುಖ್ಯ ಕಾರಣ ಎಂದು ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ: 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

3 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

6 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

6 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

6 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

6 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

7 hours ago