ಮಂಗಳೂರು: ಆಟೋ ರಿಕ್ಷಾ ಬಾಂಬ್ ಸ್ಪೋಟ ದಲ್ಲಿ ಕದ್ರಿ ದೇವಸ್ಥಾನ ಟಾರ್ಗೆಟ್ ವಿಚಾರ ಸಂಬಂಧ ಇದೀಗ ಕದ್ರಿ ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿಯು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಾಮಾಜಿಕ ಜಾಲತಾಣ ದಲ್ಲಿ ಸಂದೇಶಗಳು ಹರಿದಾಡುತ್ತಿರುವುದು ಕಂಡುಬಂದಿದೆ. ಕದ್ರಿ ಮಂಜುನಾಥೇಶ್ವರ ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತರು ಬರುತ್ತಿದ್ದಾರೆ. ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಕದ್ರಿ ದೇವಸ್ಥಾನದ ಮೇಲೆ ಬಾಂಬ್ ಬೆದರಿಕೆ ಹಾಕಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ. ಅಲ್ಲದೇ ದೇವಸ್ಥಾನಕ್ಕೆ ಸೂಕ್ತ ಭದ್ರತೆಯನ್ನು ಒದಗಿಸಬೇಕೆಂದು ಕಾರ್ಯ ನಿರ್ವಾಹಣಾಧಿಕಾರಿ ಜಯಮ್ಮ ಕದ್ರಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ:
ಸದ್ಯ ಜಯಮ್ಮ ದೂರನ್ನು ಕದ್ರಿ ಠಾಣೆ ಪೊಲೀಸರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡ ಇಸ್ಲಾಮಿಕ್ ರೆಸಿಸ್ಟನ್ಸ್ ಕೌನ್ಸಿಲ್ ಉಗ್ರ ಸಂಘಟನೆಯ ಟಾರ್ಗೆಟ್ ಆಗಿದ್ದು ಕದ್ರಿ ದೇವಸ್ಥಾನ ಅಂತ ಪೋಸ್ಟ್ ಮಾಡಿತ್ತು. ಅರೇಬಿಕ್ ಭಾಷೆಯಲ್ಲಿ ಬರೆದುಕೊಂಡು ತಮ್ಮ ಟಾರ್ಗೆಟ್ ಕದ್ರಿ ದೇವಸ್ಥಾನ ಆಗಿತ್ತು ಎಂದು ಉಗ್ರರು ಹೇಳಿರುವುದರಿಂದ ಈ ದೂರು ನೀಡಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…