ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ಇದೇನು ಚುನಾಯಿತ ಸರ್ಕಾರವೋ? ಹುಚ್ಚರ ಸಂತೆಯೋ?” ಎಂದು ಕೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಇದೇನು ಚುನಾಯಿತ ಸರ್ಕಾರವೋ? ಹುಚ್ಚರ ಸಂತೆಯೋ? ಕ್ಷಣ ಕ್ಷಣಕ್ಕೂ ಬದಲಾಗುವ ನಿರ್ಧಾರ- ಮಾರ್ಗಸೂಚಿಗಳು, ಅಘೋಷಿತ ಲಾಕ್ ಡೌನ್, ಅಮಾಯಕ ಜನತೆ ಮೇಲೆ ದೌರ್ಜನ್ಯ.. ಏನಿದು ಸಿಎಂ ಅವರೇ, ಆಡಳಿತ ನಡೆಸಲಾಗದಿದ್ದರೆ ಕುರ್ಚಿಬಿಟ್ಟು ತೊಲಗಿ, ಜನರನ್ನು ಯಾಕೆ ಗೋಳು ಹೊಯ್ಕೊಳ್ತೀರಿ?” ಎಂದು ಪ್ರಶ್ನಿಸಿದ್ದಾರೆ.
ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೊನಾಗೆ ಬಲಿ -Vishwanews24
“ಕೊರೊನಾ ಉಲ್ಭಣಗೊಂಡಿರುವುದು ಸರ್ಕಾರದ ನಿರ್ಲಕ್ಷ್ಯ, ನಿಷ್ಕ್ರಿಯತೆ ಮತ್ತು ದುರಾಡಳಿತದಿಂದ. ತಮ್ಮ ವೈಫಲ್ಯ ಮುಚ್ಚಿಹಾಕಲು ಪೊಲೀಸರ ಕೈಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೊನಾ ಓಡಿಹೋಗುವುದೇ ಬಿ.ಎಸ್.ಯಡಿಯೂರಪ್ಪ ಅವರೇ?” ಎಂದು ಕೇಳಿದ್ದಾರೆ.
“ಲಾಕ್ ಡೌನ್, ಬಂದ್, ಕರ್ಪ್ಯೂ….. ಇನ್ನೇನೋ, ಯಾವ ನಿರ್ಧಾರ ಕೈಗೊಳ್ಳುವುದಿದ್ದರೂ ಜನರಿಗೆ ಮನವರಿಕೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ಪೂರ್ವಸಿದ್ದತೆಯೊಡನೆ ಮಾಡಿ. ತಟ್ಟೆ ಬಡಿಯುವ, ಕ್ಯಾಂಡಲ್ ಹಚ್ಚುವ ಶೈಲಿಯ ಇಂತಹ ತುಘಲಕ್ ದರ್ಬಾರ್ ಪುನರಾವರ್ತನೆ ಮಾಡಬೇಡಿ” ಎಂದು ವಾಗ್ದಾಳಿ ನಡೆಸಿದ್ದಾರೆ.
ಕೋವಿಡ್ 19 : ಭಾರತದ ವಿಮಾನಗಳಿಗೆ ಇಂಗ್ಲೆಂಡ್, ಆಸ್ಟ್ರೇಲಿಯಾ, ಯುಎಇ ನಿರ್ಬಂಧ -Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…