ಬೆಂಗಳೂರು: “ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಲು ಬಿಡಲ್ಲ. ಯೋಗ್ಯತೆ ಇದ್ದರೆ ಆಡಳಿತ ನಡೆಸಲಿ. ಇಲ್ಲವಾದರೆ ನಾವು ಆಡಳಿತ ನಡೆಸುತ್ತೇವೆ,” ಎಂದು ಮಾಜಿ ಸಿಎಂ ಯಡಿಯೂರಪ್ಪ ಮೈತ್ರಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಧ್ಯಂತರ ಚುನಾವಣೆ ಆಗುತ್ತದೆ ಎಂಬ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆಗೆ ಬಿಎಸ್ವೈ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಮಧ್ಯಂತರ ಚುನಾವಣೆ ಆಗಲು ನಾವು ಬಿಡಲ್ಲ ಎಂದರು. ಯೋಗ್ಯತೆ ಇದ್ದರೆ ಆಡಳಿತ ಮಾಡಲಿ, ಇಲ್ಲವಾದರೆ ಬಿಟ್ಟುಹೋಗಲಿ ಎಂದು ನೇರಾನೇರಾ ವಾಗ್ದಾಳಿ ನಡೆಸಿದರು.
” ನಾವು 105 ಮಂದಿ ಬಿಜೆಪಿ ಶಾಸಕರಿದ್ದೇವೆ. ದೇವೇಗೌಡರು ಮಧ್ಯಂತರ ಚುನಾವಣೆ ನಡೆಯುತ್ತದೆ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ನವರು ಮಧ್ಯಂತರ ಚುನಾವಣೆ ಬೇಡ ಎನ್ನುತ್ತಿದ್ದಾರೆ. ಚುನಾವಣೆ ನಡೆದರೆ ಜನರಿಗೆ ಹೊರೆಯಾಗುತ್ತದೆ,” ಎಂದು ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದರು.
ಕಾಂಗ್ರೆಸ್, ಜೆಡಿಎಸ್ನ ಹೇಳಿಕೆಗಳು ಗೊಂದಲದ ಗೂಡಾಗಿದೆ. ಮನಸ್ಸಿಗೆ ಬಂದಂತೆ ಮಾತಾಡಿ ಗೊಂದಲ ಸೃಷ್ಟಿಸಬಾರದು. ಒಂದೇ ವರ್ಷದಲ್ಲಿ ಮತ್ತೊಂದು ಚುನಾವಣೆಗೆ ನಾವು ಹಾಗೂ ಜನತೆ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ನವರು ಮಧ್ಯಂತರ ಚುನಾವಣೆ ಬೇಡ ಎಂದರೆ, ದೇವೇಗೌಡರು ಮಧ್ಯಂತರ ಚುನಾವಣೆ ಅಂತಾರೆ. ಮಧ್ಯಂತರ ಚುನಾವಣೆಯಿಂದ ಜನರಿಗೆ ಮತ್ತೆ ಹೊರೆ ಆಗಲಿದೆ. ಹೀಗಾಗಿ ನಾವು ಮಧ್ಯಂತರ ಚುನಾವಣೆ ಆಗಲು ಬಿಡುವುದಿಲ್ಲ ಎಂದು ಹೇಳಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…