ಲಖನೌ: ಆಡಳಿತ ಬದಲಾವಣೆಯ ಉದ್ದೇಶದಿಂದ ನಡೆಯುವ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾದವರಿಗೆ ಸರಕಾರಿ ಉದ್ಯೋಗ ನಿರಾಕರಿಸುವ ಅವಕಾಶ ಕಲ್ಪಿಸುವ ಮೂಲಕ ಉತ್ತರ ಪ್ರದೇಶ ಸರಕಾರವು ನೇರ ನೇಮಕಾತಿಯ ಅಭ್ಯರ್ಥಿಗಳ ಹಿನ್ನೆಲೆ ಪರಿಶೀಲನೆ ನಿಯಮಗಳನ್ನು ಬಿಗಿಗೊಳಿಸಿದೆ.
ಇತ್ತೀಚೆಗೆ ನಡೆದ ಪ್ರತಿಭಟನೆಯೊಂದರಲ್ಲಿ ‘ಆಡಳಿತ ಬದಲಾವಣೆ’ಗೆ ಕರೆ ನೀಡಿದ ವಿಚಾರ ರಾಜಕೀಯ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಸರಕಾರ ಈ ಕ್ರಮ ಕೈಗೊಂಡಿದೆ. ಆದರೆ, ಅಭ್ಯರ್ಥಿಯ ರಾಜಕೀಯ ಸಿದ್ಧಾಂತವನ್ನು ಮಾತ್ರ ಆಧರಿಸಿ ಸರಕಾರಿ ಉದ್ಯೋಗಕ್ಕೆ ಅನರ್ಹರೆಂದು ಘೋಷಿಸುವಂತಿಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ.
ಇದನ್ನೂ ಓದಿ :
ಅದೇ ರೀತಿ, ಅಭ್ಯರ್ಥಿಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೆ ಅಥವಾ ತನಿಖೆ ನಡೆಯುತ್ತಿದೆ ಎಂಬ ಕಾರಣಕ್ಕೆ ಉದ್ಯೋಗ ನಿರಾಕರಿಸುವಂತಿಲ್ಲ. ಪ್ರಕರಣದ ಹಿನ್ನೆಲೆ ಮತ್ತು ಸಂದರ್ಭಗಳನ್ನು ಪರಿಶೀಲಿಸಿದ ಬಳಿಕವೇ ಅಧಿಕಾರಿಗಳು ನಿರ್ಧಾರ ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರವಾಗಿ ಉತ್ತರ ಪ್ರದೇಶದ ಬಿಜೆಪಿ ಸರಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಂಘರ್ಷ ತೀವ್ರಗೊಂಡಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ.
ಇದನ್ನೂ ಓದಿ :
ಪುತ್ತೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಪುತ್ತೂರು: ಅಪ್ರಾಪ್ತ ಬಾಲಕಿಯನ್ನು…
ಅ.31ರಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಮಾವೇಶ; ಪ್ರಶಸ್ತಿ ಪ್ರದಾನ ಸಮಾರಂಭ ಉಡುಪಿ : ಉಡುಪಿ ಜಿಲ್ಲಾ ಮುಸ್ಲಿಮ್…
ರೈಲುಗಳಲ್ಲಿ ರಾತ್ರಿ ಮೊಬೈಲ್ ಚಾರ್ಜಿಂಗ್ ನಿಷೇಧ: ಕಟ್ಟುನಿಟ್ಟಿನ ಜಾರಿಗೆ ರೈಲ್ವೆ ಮಂಡಳಿ ಆದೇಶ ನವದೆಹಲಿ: ದಕ್ಷಿಣ ಪೂರ್ವ ರೈಲ್ವೆಯ ಮುಂಬೈ…
ಕಾಸರಗೋಡು : ಲಾಡ್ಜ್‌ನಲ್ಲಿ ಎಂಡಿಎಂಎ ಪತ್ತೆ: ಇಬ್ಬರ ಬಂಧನ ಕಾಸರಗೋಡು: ಲಾಡ್ಜ್ ನಲ್ಲಿ ಎಂಡಿಎಂಎ ಮಾದಕ ದ್ರವ್ಯದೊಂದಿಗೆ ಯುವತಿ ಮತ್ತು…
ಕೊಂಕಣ ರೈಲ್ವೆ ವಿಲೀನ: ಮಹಾರಾಷ್ಟ್ರ ಸಿಎಂ ಭೇಟಿಯಾದ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ಕೊಂಕಣ ರೈಲ್ವೆಯನ್ನು ಭಾರತೀಯ…
ಕಾರ್ಕಳ: ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ : ನ. 1ರಂದು ಅಟ್ಟಳಿಗೆ ಮುಹೂರ್ತ ಸ್ವಾಮಿಯ ಸನ್ನಿಧಿಯಲ್ಲಿ ಬೆಳಗ್ಗೆ 7.30ರಿಂದ ಪಾದಾಭಿಷೇಕ..…