Featured

ಆಡಿದ ಮಾತಿಗೆ ಬದ್ಧನಾಗಿರಬೇಕಾಗಿರುವುದು ಉತ್ತಮ ನಾಯಕನ ಲಕ್ಷಣ‌ : ಪ್ರಧಾನಿಗೆ ದಿನೇಶ್ ಗುಂಡುರಾವ್ – Vishwnaews24

ಮೋದಿಯವರ ಮಾತನ್ನು ನಂಬಲು ದೇಶದ ಯುವಕರು  ಮೂರ್ಖರಲ್ಲ..

ಮೋದಿ ತಮ್ಮ ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ED,CBI ಮತ್ತು ITಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ..

ನಾವು ಯಾವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ?..

ದೇಶದಲ್ಲಿರುವುದು ಹಿಟ್ಲರ್‌ನ ಆಡಳಿತವೋ? ಅಥವಾ ಪ್ರಜಾಪ್ರಭುತ್ವದ ಆಡಳಿತವೋ ?

ಬೆಂಗಳೂರು: “ಉದ್ಯೋಗ ಕೇಳಿದ ಯುವಕರಿಗೆ ಪಕೋಡಾ ಮಾರಲು ಹೇಳಿದ್ದ ಪ್ರಧಾನಿ ಮೋದಿ ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಕೊಡುವುದಾಗಿ ಹೇಳಿದ್ದಾರೆ.ಆದರೆ ಮೋದಿಯವರ ಈ ಮಾತನ್ನು ನಂಬಲು ದೇಶದ ಯುವಕರು ಇಂದು ಮೂರ್ಖರಲ್ಲ” ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಕಿಡಿಕಾರಿದ್ದಾರೆ.

“ಬಿಜೆಪಿ ಸರ್ಕಾರದ ಧೋರಣೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಅವರು ಸರಣಿ ಟ್ವೀಟ್ ಮಾಡಿದ್ದು, ಸರ್ಕಾರ ಫ್ಯಾಸಿಸ್ಟ್ ಧೋರಣೆಯಿಂದ ಸರ್ವಾಧಿಕಾರಿಯಾಗಿದೆ. ಫ್ಯಾಸಿಸ್ಟ್‌ಗಳು ವಿರೋಧವನ್ನು ಹತ್ತಿಕ್ಕುವುದೇ ಧಮನಕಾರಿ ನಡೆಯ ಮೂಲಕ. ಮೋದಿ ತಮ್ಮ ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ED,CBI ಮತ್ತು ITಯನ್ನು ದುರ್ಬಳಕೆ ಮಾಡಿಕೊಂಡಿದಲ್ಲದೆ, ಈಗ ವಿರೋಧಿಗಳನ್ನು ಹಣಿಯಲು ದೆಹಲಿ ಪೊಲೀಸರನ್ನು ಕೂಡ ಗೂಂಡಾಗಳಾಗಿ ಪರಿವರ್ತಿಸಿದೆ” ಎಂದು ಆರೋಪಿಸಿದ್ದಾರೆ

“ಕೇಂದ್ರದ ಗೃಹ ಇಲಾಖೆಯ ಅಡಿ ಕಾರ್ಯನಿರ್ವಹಿಸುವ ದೆಹಲಿ‌ ಪೊಲೀಸರು ಅಮಿತ್ ಶಾ ಹುಕುಂ ಪಾಲಿಸುವ ಅಡಿಯಾಳುಗಳಾಗಿದ್ದಾರೆ. ಕಾಂಗ್ರೆಸ್ ನಾಯಕರಿಗೇ ಪಕ್ಷದ ಕಚೇರಿಗೆ ಹೋಗಲು ದೆಹಲಿ ಪೊಲೀಸರು ಅವಕಾಶ ನೀಡುವುದಿಲ್ಲವೆಂದರೆ ನಾವು ಯಾವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ? ದೇಶದಲ್ಲಿರುವುದು ಹಿಟ್ಲರ್‌ನ ಆಡಳಿತವೋ? ಅಥವಾ ಪ್ರಜಾಪ್ರಭುತ್ವದ ಆಡಳಿತವೋ” ಎಂದು ಪ್ರಶ್ನಿಸಿದ್ದಾರೆ.

“ಆಡಿದ ಮಾತಿಗೆ ಬದ್ಧನಾಗಿರಬೇಕಾಗಿರುವುದು ಉತ್ತಮ ನಾಯಕನ ಲಕ್ಷಣ‌.ಆದರೆ ಮೋದಿಯವರದ್ದು ಆಡುವುದೇ ಒಂದು, ಮಾಡುವುದೇ ಇನ್ನೊಂದು ಎಂಬಂತಾಗಿದೆ. ಮೋದಿಯವರಿಗೆ ಆತ್ಮಸಾಕ್ಷಿಯಿದ್ದರೆ ತಾವು ಆಡಿರುವ ಮಾತುಗಳ ವಿಡಿಯೋ ಕ್ಲಿಪ್ಪಿಂಗ್ ನೋಡಲಿ‌. ಆಗಲೂ ತಮ್ಮ‌ ಮೇಲೆ ತಮಗೇ ಅಸಹ್ಯಭಾವ ಮೂಡದಿದ್ದರೆ ಅವರ ಆತ್ಮಸಾಕ್ಷಿ ಸತ್ತು ಹೋಗಿದೆ ಎಂದೇ ಅರ್ಥ “ಎಂದು ಹೇಳಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

8 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

8 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

8 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

9 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago