ಬೆಂಗಳೂರು: ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಹಣಕಾಸು ಬಜೆಟ್‍ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಸ್ವಾಗತ ಕೋರಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?: ಆತ್ಮನಿರ್ಭರ್ ಭಾರತ್ ಒಳಗೊಂಡ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಗುರಿಯ ಬಜೆಟ್ ಇದಾಗಿದೆ. ಕರ್ನಾಟಕ ಅಭಿವೃದ್ಧಿ ಚಟುವಟಿಕೆಗಳಿಗೆ ಈ ಬಜೆಟ್‍ನಿಂದ ಉತ್ತೇಜನ ಸಾಧ್ಯ. ಬಜೆಟ್‍ನಲ್ಲಿ ಹಂಚಿಕೆಯಾದ ಸಂಪನ್ಮೂಲ ಪರಿಣಾಮಕಾರಿ ಬಳಕೆ ಮಾಡುತ್ತೇವೆ.
ನಬಾರ್ಡ್‍ನಿಂದ ಕೃಷಿ ಮತ್ತು ಗ್ರಾಮೀಣ ಉದ್ಯಮಗಳ ಸ್ಟಾರ್ಟ್-ಅಪ್‍ಗಳಿಗೆ ಹಣಕಾಸು ಒದಗಿಸಲು ಹಾಗೂ ಕೃಷಿ ವಿಶ್ವವಿದ್ಯಾಲಯಗಳ ಪಠ್ಯಕ್ರಮಗಳ ಪರಿಷ್ಕರಣೆಗಳಿಗೆ ಆರ್ಥಿಕ ಸಹಾಯವನ್ನು ಮಾಡಿದೆ. ಜೊತೆಗೆ ನಮ್ಮ ಆರ್ಥಿಕತೆಯ ಬೆನ್ನೆಲುಬನ್ನು ಸಶಕ್ತಗೊಳಿಸಲು ಬೇಕಾದ ಎಲ್ಲಾ ರೀತಿಯ ಸೌಕರ್ಯವನ್ನು ನೀಡಿದೆ.
ಕೃಷಿಗೆ ಉತ್ತೇಜನ ನೀಡಲು ಗೋಧಿ ಮತ್ತು ಭತ್ತದ ಖರೀದಿ ಮಾಡುವುದರ ಜೊತೆಗೆ 163 ಲಕ್ಷ ರೈತರ ಖಾತೆಗಳಿಗೆ 2.37 ಲಕ್ಷ ಕೋಟಿ ರೂ.ಗಳ ನೇರ ಪಾವತಿ ಮಾಡುವುದಾಗಿ ಘೋಷಿಸಿದೆ. ಕಿಸಾನ್ ಡ್ರೋನ್‍ಗಳ ಬಳಕೆ ಮತ್ತು ದೇಶಾದ್ಯಂತ ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಹೆಚ್ಚಿನ ಒತ್ತನ್ನು ನೀಡಿದೆ.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…