Featured

ಆತ್ಮನಿರ್ಭರ್ ಭಾರತ್ ಒಳಗೊಂಡ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಗುರಿಯ ಬಜೆಟ್ : CM ಬೊಮ್ಮಾಯಿ – Vishwanews24

ಆತ್ಮನಿರ್ಭರ್ ಭಾರತ್ ಒಳಗೊಂಡ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಗುರಿಯ ಬಜೆಟ್ : CM ಬೊಮ್ಮಾಯಿ – Vishwanews24

ಬೆಂಗಳೂರು: ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಹಣಕಾಸು ಬಜೆಟ್‍ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಸ್ವಾಗತ ಕೋರಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಆತ್ಮನಿರ್ಭರ್ ಭಾರತ್ ಒಳಗೊಂಡ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಗುರಿಯ ಬಜೆಟ್ ಇದಾಗಿದೆ. ಕರ್ನಾಟಕ ಅಭಿವೃದ್ಧಿ ಚಟುವಟಿಕೆಗಳಿಗೆ ಈ ಬಜೆಟ್‍ನಿಂದ ಉತ್ತೇಜನ ಸಾಧ್ಯ. ಬಜೆಟ್‍ನಲ್ಲಿ ಹಂಚಿಕೆಯಾದ ಸಂಪನ್ಮೂಲ ಪರಿಣಾಮಕಾರಿ ಬಳಕೆ ಮಾಡುತ್ತೇವೆ.

ನಬಾರ್ಡ್‍ನಿಂದ ಕೃಷಿ ಮತ್ತು ಗ್ರಾಮೀಣ ಉದ್ಯಮಗಳ ಸ್ಟಾರ್ಟ್-ಅಪ್‍ಗಳಿಗೆ ಹಣಕಾಸು ಒದಗಿಸಲು ಹಾಗೂ ಕೃಷಿ ವಿಶ್ವವಿದ್ಯಾಲಯಗಳ ಪಠ್ಯಕ್ರಮಗಳ ಪರಿಷ್ಕರಣೆಗಳಿಗೆ ಆರ್ಥಿಕ ಸಹಾಯವನ್ನು ಮಾಡಿದೆ. ಜೊತೆಗೆ ನಮ್ಮ ಆರ್ಥಿಕತೆಯ ಬೆನ್ನೆಲುಬನ್ನು ಸಶಕ್ತಗೊಳಿಸಲು ಬೇಕಾದ ಎಲ್ಲಾ ರೀತಿಯ ಸೌಕರ್ಯವನ್ನು ನೀಡಿದೆ.

ಕೃಷಿಗೆ ಉತ್ತೇಜನ ನೀಡಲು ಗೋಧಿ ಮತ್ತು ಭತ್ತದ ಖರೀದಿ ಮಾಡುವುದರ ಜೊತೆಗೆ 163 ಲಕ್ಷ ರೈತರ ಖಾತೆಗಳಿಗೆ 2.37 ಲಕ್ಷ ಕೋಟಿ ರೂ.ಗಳ ನೇರ ಪಾವತಿ ಮಾಡುವುದಾಗಿ ಘೋಷಿಸಿದೆ. ಕಿಸಾನ್ ಡ್ರೋನ್‍ಗಳ ಬಳಕೆ ಮತ್ತು ದೇಶಾದ್ಯಂತ ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಹೆಚ್ಚಿನ ಒತ್ತನ್ನು ನೀಡಿದೆ.

ಇದನ್ನೂ ಓದಿ :

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago