ಪಡುಬಿದ್ರಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡುಬಿದ್ರಿ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವು ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ಯುವವಾಹಿನಿ (ರಿ.) ಪಡುಬಿದ್ರಿ ಘಟಕ, ಇವರುಗಳ ಜಂಟಿ ಸಹಯೋಗದೊಂದಿಗೆ ಜೂನ್ 23 ರ ಆದಿತ್ಯವಾರ, ಪೂರ್ವಾಹ್ನ9.30 ರಿಂದ ಅಪರಾಹ್ನ12.30ರವರೆಗೆ ಕರ್ನಾಟಕ ಪಬ್ಲಿಕ್ ಶಾಲೆ (ಬೋರ್ಡ್ ಶಾಲೆ), ಪಡುಬಿದ್ರಿಯಲ್ಲಿ ಆಯೋಜಿಸಲಾಗಿದೆ.
ವೈದ್ಯಕೀಯ ಶಿಬಿರದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ ,ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದಿ0ದ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಹುಳುಕು ಹಲ್ಲುಗಳ ಭರ್ತಿ, ಶುಚಿಗೊಳಿಸುವುದು, ಕೀಳುವುದು, ಬಿ.ಪಿ. ಮತ್ತು ಮಧುಮೇಹ ತಪಾಸಣೆ, ಸಾಮಾನ್ಯ ರೋಗ ತಪಾಸಣೆ, ಉಚಿತ ಔಷಧಿ ವಿತರಣೆ, ರಕ್ತ ಗುಂಪಿನ ವರ್ಗಿಕರಣ, ಇತರ ವೈದ್ಯಕೀಯ ಸೇವೆಗಳು ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆಗಳನ್ನು ನೀಡಲಾಗುವುದು. ಅಗತ್ಯವುಳ್ಳ ಕಣ್ಣಿನ ರೋಗಿಗಳಿಗೆ ಸಂಘದ ವತಿಯಿಂದ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…