ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆ ಸಂತೋಷ್ ವಿರುದ್ಧ ಎಫ್ಐಆರ್ ದಾಖಲು -Vishwanews24
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆಗೆ ಯತ್ನ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಆತ್ಮಹತ್ಯೆಗೆ ಯತ್ನಿಸಿರುವುದು ಕಾನೂನುಬಾಹಿರವಾಗಿರುವ ಹಿನ್ನೆಲೆಯಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 309 ಅಡಿ ಎನ್.ಆರ್. ಸಂತೋಷ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಂತೋಷ್ ಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವಂತೆಯೂ ಸೂಚಿಸಲಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಯ ಹಿಂದೆ ರಾಜಕೀಯ ಕೈವಾಡವಿತ್ತೆ ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸಲು ಮುಂದಾಗಿದ್ದಾರೆ.


